ವಿಜಯಸಾಕ್ಷಿ ಸುದ್ದಿ, ಗದಗ : ಗದಗ ತಾಲೂಕು ಮಟ್ಟದ `ಎ’ ಗ್ರೂಪ್ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ ಪಾಪನಾಶಿಯ ಜೆಜಿ ಪಿಯು ಸೈನ್ಸ್ ಕಾಲೇಜಿನಲ್ಲಿ ನಡೆಯಿತು. ನಡೆಸಲಾಯಿತು. ಸಂಸ್ಥೆಯ ಸಂಸ್ಥಾಪಕರಾದ ಐ.ಎಸ್. ಪೂಜಾರ್ ಕ್ರೀಡಾ ಧ್ವಜಾರೋಹಣ ಮಾಡಿ ಕ್ರೀಡಾಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.
Advertisement
  
ಕುರ್ತಕೋಟಿ ಕಾಲೇಜು ಪ್ರಾಚಾರ್ಯ ಬೆಲ್ಲದ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ.ಎನ್. ಕುರ್ತಕೋಟಿ, ದೈಹಿಕ ಶಿಕ್ಷಣಾಧಿಕಾರಿ ಟಿ.ಎಸ್. ಪವಾರ್, ಈಶ್ವರ ಎಸ್.ತಿಪ್ಪಾರೆಡ್ಡಿ ಅತಿಥಿಗಳಾಗಿ ಆಗಮಿಸಿದ್ದರು. ಕ್ರೀಡಾಕೂಟದಲ್ಲಿ 24 ಕಾಲೇಜುಗಳು ಪಾಲ್ಗೊಂಡಿದ್ದವು.
ಪ್ರಾಚಾರ್ಯ ಚಂದ್ರಕಾಂತ ಚವ್ಹಾಣ ಸ್ವಾಗತ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಕರು, ಶರಣು ಚೇಗರೆಡ್ಡಿ, ಮಹಾಂತೇಶ ಕುರಹಟ್ಟಿ, ಜೆ.ಜಿ ಸಂಸ್ಥೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.


