ಬೆಳಗಾವಿ:- ಬೈಲಹೊಂಗಲ ತಾಲೂಕಿನ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಳನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಆರೋಪ ಕೇಳಿಬಂದಿದೆ.
Advertisement
13ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಆರೋಪಿಗಳಿಂದ ಹೇಯಕೃತ್ಯ ನಡೆದಿದೆ ಎನ್ನಲಾಗಿದೆ. ಬಾಲಕಿ ತನ್ನ ಮನೆಯಿಂದ ಹಿಟ್ಟಿನ ಗಿರಿಣಿಗೆ ಕಾಳು ಬೀಸಲು ಹೊರಗೆ ಹೋಗಿದ್ದಾಗ, ಕಾಮುಕರು ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರ ಮಾಡಿದ್ದಾರೆ ಎನ್ನಲಾಗಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದು ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.
ನ.23ರಂದೇ ಪ್ರಕರಣ ನಡೆದಿದ್ದು, ಯಾರಿಗಾದರೂ ವಿಷಯ ತಿಳಿಸಿದರೆ ಬಾಲಕಿಯನ್ನು ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಈ ಸಂಬಂಧ ಮುರಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.


