ಮೈಸೂರು:- ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪೈಶಾಚಿಕ ಕೃತ್ಯ ಒಂದು ನಡೆದಿದೆ. ಮಗಳ ಸಮಾನಳಾದ ಅಪ್ರಾಪ್ತೆ ಮೇಲೆ ಚಿಕ್ಕಪ್ಪನೇ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿರುವ ಆಘಾತಕಾರಿ ಘಟನೆ ಜರುಗಿದೆ.
ಘಟನೆ ಹಿನ್ನೆಲೆ, ಇದೀಗ ಪೊಲೀಸರು ಕಾಮುಕ ಚಿಕ್ಕಪ್ಪನನ್ನು ಅರೆಸ್ಟ್ ಮಾಡಿದ್ದಾರೆ. ನಂಜುಂಡಸ್ವಾಮಿ ಬಂಧಿತ ಆರೋಪಿ. ಈತ 10ನೇ ತರಗತಿ ಓದುತ್ತಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಕಳೆದ ಎರಡು ತಿಂಗಳಿಂದ ಪೀರಿಯೆಡ್ಸ್ ಆಗಿಲ್ಲವೆಂಬ ಕಾರಣಕ್ಕೆ ಬಾಲಕಿಯನ್ನ ವೈದ್ಯರು ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.
ಕಳೆದ ಜನವರಿಯಲ್ಲಿ ವಿದ್ಯಾರ್ಥಿನಿಯನ್ನ ಪುಸಲಾಯಿಸಿ ಮನೆಗೆ ಕರೆತಂದಿದ್ದ ಕಾಮುಕ ಬಲವಂತವಾಗಿ ದೈಹಿಕ ಸಂಪರ್ಕ ನಡೆಸಿ ಯಾರಿಗೂ ತಿಳಿಸಬಾರದೆಂದು ತಿಳಿಸಿ ಅಮಾಯಕನಂತೆ ಮತ್ತೆ ಶಾಲೆಗೆ ಬಿಟ್ಟಿದ್ದಾನೆ. ಪಿರಿಯಡ್ಸ್‌ನಲ್ಲಿ ವ್ಯತ್ಯಾಸ ಕಂಡುಬಂದು ಹೊಟ್ಟೆ ನೋವಿದೆ ಎಂದು ವೈದ್ಯರ ಬಳಿ ತೆರಳಿದಾಗ ಬಾಲಕಿ 6 ತಿಂಗಳ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ.
ಈ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.