ಜೈಲೂಟ ತಿನ್ನಲು ಆಗ್ತಿಲ್ಲ ಎಂದು ದಾಸನ ಗೋಳಾಟ! ಸದ್ಯಕಿಲ್ಲ ನಟ ದರ್ಶನ್ʼಗೆ ಮನೆ ಊಟ – ಸೆ.5ಕ್ಕೆ ವಿಚಾರಣೆ ಮುಂದೂಡಿಕೆ

0
Spread the love

ಬೆಂಗಳೂರು: ರೇಣುಕಾಸ್ವಾಮಿಯನ್ನು ಬರ್ಬರವಾಗಿ ಕೊಲೆ ಮಾಡಿದ ಪ್ರಕರಣದಲ್ಲಿ ನಟ ದರ್ಶನ್ ಌಂಡ್ ಗ್ಯಾಂಗ್ ಪರಪ್ಪನ ಮಡಿಲು ಸೇರಿದ್ದಾರೆ. ಡೆವಿಲ್​ ಗ್ಯಾಂಗ್​ನ ಸೆರೆಮನೆ ವಾಸ 60 ದಿನ ಪೂರೈಸಿ 75ನೇ ದಿನಕ್ಕೆ ಕಾಲಿಡ್ತಿದೆ.  ದರ್ಶನ್​ಗೆ ಮನೆ ಊಟ ಬೇಕೆಂದು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಇಂದು ನಡೆದಿದೆ. ಅನಾರೋಗ್ಯದ ಕಾರಣದಿಂದ ಮನೆ ಊಟ, ಮಲಗಲು ಹಾಸಿಗೆ ಹಾಗೂ ಕೆಲವು ಪುಸ್ತಕಗಳು ಬೇಕೆಂದು ನಟ ದರ್ಶನ್ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

Advertisement

ಮನವಿಯ ಅರ್ಜಿಯನ್ನು ಹೈಕೋರ್ಟ್‌  ಸೆ.5ಕ್ಕೆ ಮುಂದೂಡಿದೆ. ಇಂದು ನ್ಯಾ. ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ನ್ಯಾಯಾಲಯಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್ ಹಾಗೂ ದರ್ಶನ್ ಪರ ವಕೀಲ ಪ್ರಭುಲಿಂಗ ನಾವದಗಿ ಹಾಜರಾಗಿದ್ದರು.

ಮನೆಯೂಟಕ್ಕೆ ಅವಕಾಶ ನೀಡುವಂತೆ ದರ್ಶನ್‌ ಮಾಡಿದ್ದ ಮನವಿಯನ್ನು ಕಾರಾಗೃಹ ಇಲಾಖೆಯ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು ತಿರಸ್ಕರಿಸಿದ್ದಾರೆ. ಮನವಿ ವಜಾಗೊಂಡ ಹಿನ್ನೆಲೆಯಲ್ಲಿ ವಾದ ಮಂಡನೆಗೆ ಅವಕಾಶ ಕೋರಿ ಪ್ರಭುಲಿಂಗ ನಾವದಗಿ ಮನವಿ ಮಾಡಿದರು. ನಾವದಗಿ ಮನವಿ ಪುರಸ್ಕರಿಸಿದ ಕೋರ್ಟ್‌ ಸೆ.5ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ದರ್ಶನ್ ಆರೋಗ್ಯ ಸ್ಥಿರವಾಗಿದೆ. ದರ್ಶನ್‌ ಅವರಿಗೆ ಮನೆಯೂಟ, ಹಾಸಿಗೆ, ಬಟ್ಟೆ ನೀಡಲು ಸಾಧ್ಯವಿಲ್ಲ. ಆರೋಪಿ ದರ್ಶನ್‌ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ. ಮನೆಯೂಟ ಕೊಡುವ ಪರಿಸ್ಥಿತಿ ನಿರ್ಮಾಣ ಆಗಿಲ್ಲ ಎಂದು ಕಾರಾಗೃಹ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು ಮನೆಯೂಟ ನಿರಾಕರಿಸಿ ಆದೇಶ ಹೊರಡಿಸಿದ್ದರು.


Spread the love

LEAVE A REPLY

Please enter your comment!
Please enter your name here