ಮಂಡ್ಯ:- ಜಿಲ್ಲೆಯ ಪಾಂಡವಪುರ ತಾಲೂಕಿನ ಕೆನ್ನಾಳುನಲ್ಲಿ ಎರಡು ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.
Advertisement
25 ವರ್ಷದ ಪೂಜಾ ಸಾವಿಗೀಡಾದ ಗೃಹಿಣಿ. ಪೋಷಕರ ವಿರೋಧದ ನಡುವೆಯೂ ಕೆನ್ನಾಳು ಗ್ರಾಮದ ಅಭಿನಂದನ್ ಜೊತೆ ಪೂಜಾ ಮದುವೆಯಾಗಿದ್ದಳು. ಮದುವೆ ಬಳಿಕ ಗಂಡನ ಮನೆಯವರಿಂದ ಕಿರುಕುಳ ನೀಡಿದ್ದಾರೆ ಎಂದು ಪೂಜಾ ಪೋಷಕರು ಆರೋಪಿಸಿದ್ದಾರೆ.
ಗುರುವಾರ ರಾತ್ರಿ ಕೊಲೆ ಮಾಡಿ ನೇಣು ಬಿಗಿದಿದ್ದಾರೆ. ಗಂಡನೇ ಕೊಲೆ ಮಾಡಿ ಈ ಕೃತ್ಯ ಎಸಗಿದ್ದಾನೆ ಎಂದು ಪೂಜಾ ಕುಟುಂಬಸ್ಥರು ದೂರಿದ್ದಾರೆ. ಪೂಜಾ ಮತಪಟ್ಟ ಬಳಿಕವೂ ಪೊಲೀಸರು ಎಫ್‌ಐಆರ್ ದಾಖಲಿಸಿಲ್ಲ. ತಡ ಯಾಕೆ ಮಾಡುತ್ತಿದ್ದಾರೆ ಎನ್ನುವುದು ಗೊತ್ತಿಲ್ಲ ಎಂದು ಪೋಷಕರು ಆಕ್ರೋಶ ಹೊರಹಾಕಿದ್ದಾರೆ.