ಚಿಕ್ಕಮಗಳೂರು:- ಭಾರೀ ಗಾಳಿ-ಮಳೆಗೆ ಬೃಹತ್ ಗಾತ್ರದ ಮರ ಧರೆಗುರುಳಿದ ಘಟನೆ ಚಾರ್ಮಾಡಿ ಘಾಟಿಯಲ್ಲಿ ಜರುಗಿದೆ. ಘಟನೆ ಪರಿಣಾಮ ಫುಲ್ ಟ್ರಾಫಿಕ್ ಜಾಮ್ ಆಗಿದೆ.
ಎಸ್, ನಗರದಲ್ಲಿ ಸುರಿಯುತ್ತಿರುವ ಭಾರೀ ಗಾಳಿ-ಮಳೆಗೆ ಚಾರ್ಮಾಡಿಯ ಘಾಟಿ ಅಣ್ಣಪ್ಪ ಸ್ವಾಮಿ ದೇಗುಲದ ಸಮೀಪ ಭಾರೀ ಗಾತ್ರದ ಮರ ಬಿದ್ದಿದೆ. ಇದರಿಂದ ಚಿಕ್ಕಮಗಳೂರು-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಸುಮಾರು 3 ಕಿಮೀ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಒಂದು ಗಂಟೆ ಬಳಿಕ ಜೆಸಿಬಿ ಮೂಲಕ ಮರ ತೆರವು ಮಾಡಲಾಯಿತು. ಬಳಿಕ ವಾಹನ ಸಂಚಾರ ಆರಂಭವಾಯಿತು. ಘಾಟಿಯಲ್ಲಿ ವಾಹನ ಸವಾರರು ಎಚ್ಚರಿಕೆಯಿಂದ ಚಾಲನೆ ಮಾಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.



