ಬೆಂಗಳೂರು:- ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಿ ನಿವಾಸದ ಬಳಿಯೇ ಬೃಹತ್ ಮರವೊಂದು ಧರೆಗುರುಳಿ ಅನಾಹುತ ಸಂಭವಿಸಿದೆ. ಪರಿಣಾಮ ರಸ್ತೆಯಲ್ಲಿ ಹೋಗುತ್ತಿದ್ದ ಟಿಟಿ ಹಾಗೂ ಇನ್ನೋವಾ ಮೇಲೆ ಮರದ ಕೊಂಬೆಗಳು ಬಿದ್ದಿವೆ. ಮರ ಬಿದ್ದ ಹಿನ್ನೆಲೆ ಶಿವಾನಂದ ಬಳಿಯೇ ಪೊಲೀಸರು ರಸ್ತೆ ಬಂದ್ ಮಾಡಿದ್ದಾರೆ.
Advertisement
ಗಾಳಿ ಇಲ್ಲ, ಮಳೆ ಇಲ್ಲ ಅಂದ್ರೂ ಸಿಎಂ ಸಿದ್ದರಾಮಯ್ಯ ಸರ್ಕಾರಿ ನಿವಾಸದ ಬಳಿಯೇ ಮರ ಉರುಳಿ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇನ್ನೂ ಮೊನ್ನೆ-ಮೊನ್ನೆ ತಾನೇ ಜೂ.15ರಂದು ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದಾಗಲೇ ಮರದ ಕೊಂಬೆ ಬಿದ್ದು ಬಸವನಗುಡಿಯ ಬ್ರಹ್ಮ ಚೈತನ್ಯ ಮಂದಿರದ ಬಳಿ ಸವಾರ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.