ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್‌ ಮರ: ಇಬ್ಬರು ಆಸ್ಪತ್ರೆ ಪಾಲು!

0
Spread the love

ಬೆಂಗಳೂರು:- ನಗರದ ಚಿನ್ನಸ್ವಾಮಿ ಸ್ಟೇಡಿಯಂ ಸಮೀಪ ಬೃಹತ್‌ ಗಾತ್ರದ ಮರವೊಂದು ಬುಡ ಸಮೇತ ಬಿದ್ದಿದೆ. ಚಲಿಸುತ್ತಿದ್ದ ಕಾರುಗಳ ಮೇಲೆ ಮರ ಬಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಮೂರು ಕಾರುಗಳಿಗೆ ಹಾನಿಯಾಗಿದೆ.

Advertisement

ಇಬ್ಬರಿಗೆ ಗಾಯಗಳಾಗಿದ್ದು, ಸ್ಥಳೀಯರು ಕೂಡಲೇ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಬಿಬಿಎಂಪಿ, ಅರಣ್ಯ ಸಿಬ್ಬಂದಿ ಮರ ತೆರವು ಮಾಡಿದ್ದಾರೆ. ಮರ ಬಿದ್ದ ಪರಿಣಾಮ ನಕ್ಕುಲ್ ಹಾಗೂ ನತಾಶಾ ಎಂಬುವವರಿಗೆ ಗಾಯವಾಗಿದೆ. ಅಣ್ಣ ತಂಗಿ ಇಬ್ಬರು ಕಾರಿನಲ್ಲಿ ಹೋಗುತ್ತಿದ್ದಾಗ ಏಕಾಏಕಿ ಮರ ಬಿದ್ದಿದೆ.

ಓರ್ವ ಗಾಯಾಳಿಗೆ ತಲೆ ಹಾಗೂ ಎದೆಯ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಎದೆಯ ಮೂಳೆ ಮುರಿದಿರುವ ಸಾಧ್ಯತೆ ಇದೆ. ಮತ್ತೊಬ್ಬ ಗಾಯಾಳುವಿನ ಕುತ್ತಿಗೆ ಭಾಗಕ್ಕೆ ಗಂಭೀರ ಗಾಯವಾಗಿದೆ. ಇಬ್ಬರಿಗೂ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.


Spread the love

LEAVE A REPLY

Please enter your comment!
Please enter your name here