ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಜೆಸಿಬಿ..! ಕಂದಮ್ಮ ಸಾವು

0
Spread the love

ಬೆಂಗಳೂರು: ಆಟವಾಡುತ್ತಿದ್ದ ಮಗುವಿನ ಮೇಲೆ ಜೆಸಿಬಿ ಹರಿದು ಮಗು ಸಾವನ್ನಪ್ಪಿರುವ ಘಟನೆ ಕಾಡುಗೋಡಿ ಬಳಿಯ ಸಿಟಿ ಲೇಔಟ್ ನಲ್ಲಿ ನಡೆದಿದೆ. ಥವನ್ ರೆಡ್ಡಿ (2) ಮೃತಪಟ್ಟ ಮಗುವಾಗಿದ್ದು,

Advertisement

ಚಾಲಕ ಜೆಸಿಬಿಯನ್ನು ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ಮನೆ ಮುಂದೆ ಆಟವಾಡುತ್ತಿದ್ದ ಮಗು ಮೇಲೆ ಹರಿದಿದೆ. ರಸ್ತೆಯಲ್ಲಿ ಆಟವಾಡುತ್ತಿದ್ದ ಥವನ್ ರೆಡ್ಡಿ ತಲೆಯ ಮೇಲೆ ಜೆಸಿಬಿ ಹರಿದಿದೆ.

ಕೂಡಲೇ ಮಗುವನ್ನು ವೈದೇಹಿ ಆಸ್ಪತ್ರೆಗೆ ರವಾನಿಸಲಾಗಿದೆ. ಪರೀಕ್ಷೆ ನಡೆಸಿದ ವೈದ್ಯರು ಮಾರ್ಗ ಮಧ್ಯದಲ್ಲಿ ಮಗು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆ ನಡೆದಿದ್ದು, ಮಹಾದೇವಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here