ನವದೆಹಲಿ:- ಕುಂಭಮೇಳದಿಂದ ಅಯೋಧ್ಯೆಗೆ ತೆರಳುತ್ತಿದ್ದ ಕೊಪ್ಪಳದ ಯುವಕ ದುರಂತ ಸಾವಿಗೀಡಾಗಿದ್ದಾರೆ. ಪ್ರಯಾಗ್‌ರಾಜ್ ಹೋಗಿ, ಅಲ್ಲಿಂದ ಅಯೋಧ್ಯೆಗೆ ತೆರಳುವಾಗ ರೈಲಿನಲ್ಲಿ ವಿದ್ಯುತ್ ತಗುಲಿ ಸಾವನ್ನಪ್ಪಿರುವ ಘಟನೆ ಗೋರಖಪುರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
Advertisement
27 ವರ್ಷದ ಪ್ರವೀಣ್ ಹೊಸಮನಿ ಮೃತ ಯುವಕ. ಹದಿನೈದು ದಿನಗಳ ಹಿಂದೆ ಪ್ರವೀಣ್ ಪ್ರಯಾಗರಾಜ್‌ಗೆ ಹೋಗಿದ್ದರು. ಪ್ರಯಾಗ್‌ರಾಜ್‌ಗೆ ತೆರಳಿ ಬಳಿಕ ಅಲ್ಲಿಂದ ಅಯೋಧ್ಯೆಗೆ ರೈಲಿನಲ್ಲಿ ಹೋಗುತ್ತಿದ್ದರು. ಈ ವೇಳೆ ಗೋರಖಪುರ ರೈಲ್ವೆ ನಿಲ್ದಾಣದಲ್ಲಿ ವಿದ್ಯುತ್ ತಗುಲಿ ತೀವ್ರ ಗಾಯಗೊಂಡಿದ್ದರು. ಸ್ಥಳದಲ್ಲಿದ್ದ ರೈಲ್ವೆ ಪೊಲೀಸರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಿಸದೇ ಗೋರಖ್‌ಪುರ ಬಿಆರ್‌ಡಿ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಇಂದು ಅಸುನೀಗಿದ್ದಾರೆ.
ಸ್ಥಳೀಯ ಪೊಲೀಸರು ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ.