ಬೆಂಗಳೂರು: ನ್ಯಾಯಾಲಯದ ಆವರಣದಲ್ಲೇ ದೂರು ಕೊಟ್ಟ ಮಹಿಳೆಗೆ ಇರಿದ ಘಟನೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್‍ನಲ್ಲಿ ನಡೆದಿದೆ. ಹಲ್ಲೆಗೊಳಗಾದ ವಕೀಲೆ ವಿಮಲಾ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಮಲಾ ಪರಿಸ್ಥಿತಿ ಗಂಭೀರವಾಗಿದೆ. ಜಯರಾಮರೆಡ್ಡಿ ಚಾಕು ಇರಿದ ಆರೋಪಿಯಾಗಿದ್ದಾನೆ.
Advertisement
ಆರೋಪಿ ವಿರುದ್ಧ ಮಹಿಳೆ ಶೇಷಾದ್ರಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇಂದು ವಿಚಾರಣೆಗೆ ನ್ಯಾಯಾಲಯಕ್ಕೆ ಬಂದಿದ್ದ ವೇಳೆ ಮಹಿಳೆಗೆ ಆರೋಪಿ ಕೋರ್ಟ್ ಹಾಲ್ 1 ರಲ್ಲಿ ಚಾಕು ಇರಿದಿದ್ದಾನೆ. ಸದ್ಯ ಕೇಂದ್ರ ವಿಭಾಗ ಡಿಸಿಪಿ ಶೇಖರ್ ಪ್ರಕರಣ ಸಂಬಂಧ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.