ಬೆಂಗಳೂರು:- ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಜರುಗಿದೆ.
ನಗರದ ದಾಸರಹಳ್ಳಿ ಮೆಟ್ರೋ ಸ್ಟೇಷನ್ ಬಳಿ ಜರುಗಿದೆ. 23 ವರ್ಷದ ಶೇಷಾದ್ರಿ ಮೃತ ಸವಾರ ಎನ್ನಲಾಗಿದೆ. ಶೇಷಾದ್ರಿ ರಾಜಗೋಪಾಲನಗರ ನಿವಾಸಿ. ಘಟನೆ ಬಳಿಕ ಸ್ಥಳದಲ್ಲೇ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೀಣ್ಯ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಪಘಾತ ಮಾಡಿದ ಲಾರಿಯನ್ನು ಪೀಣ್ಯ ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಮೃತ ಶೇಷಾದ್ರಿ ತಂದೆ ಚಂದ್ರಶೇಖರ್ ಪೀಣ್ಯಾ ಸಂಚಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.



