ಬೆಂಗಳೂರು: ಸಾಲಬಾದೆಯಿಂದ ಡೆತ್ ನೋಟ್ ಬರೆದಿಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಸಂಪಿಗೆಹಳ್ಳಿ ಕೆರೆ ಬಳಿ ನಡೆದಿದೆ. ಸಾಲಬಾದೆಯಿಂದ ನಿರ್ಜನ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ವೆಸ್ಲೀ ಸುಂದರ್ ಸೂಸೈಡ್ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement