ರಾಯಚೂರು:- ರಾಯಚೂರಿನ ತುಂಗಾಭದ್ರಾ ಗ್ರಾಮದಲ್ಲಿ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಮೀನುಗಾರನೊಬ್ಬ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜರುಗಿದೆ.
42 ವರ್ಷದ ದೇವಪ್ಪ ಮೃತ ವ್ಯಕ್ತಿ. ಗ್ರಾಮದ ಬಳಿ ತುಂಗಾಭದ್ರಾ ನದಿಯಲ್ಲಿ ಮೀನು ಹಿಡಿಯುವ ವೇಳೆ ಸಿಡಿಲು ಬಡಿದಿದೆ. ತೆಪ್ಪದಲ್ಲಿ ಮೀನು ಹಿಡಿಯಲು ತೆರಳಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಕೂಡಲೇ ಉಳಿದ ಮೀನುಗಾರರು ದೇವಪ್ಪನ ರಕ್ಷಣೆಗೆ ಮುಂದಾಗಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಈ ಸಂಬಂಧ ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



