ಶಿವಮೊಗ್ಗ: ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಪ್ರವಾಸಕ್ಕೆ ಬಂದಿದ್ದ ವ್ಯಕ್ತಿಯೊಬ್ಬರು ಶರಾವತಿ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಸಿಗಂದೂರು ಸೇತುವೆ ಬಳಿ ನಡೆದಿದೆ.
ಮೃತರನ್ನು ಆಂಧ್ರಪ್ರದೇಶ ಮೂಲದ ಉಮೇಶ್ (35) ಎಂದು ಗುರುತಿಸಲಾಗಿದೆ. ಅವರು ಅನಂತಪುರ ಜಿಲ್ಲೆಯ ರಾಯದುರ್ಗ ತಾಲೂಕಿನ ಗಲಗಲಿ ಗ್ರಾಮದ ನಿವಾಸಿಯಾಗಿದ್ದರು.
ಕುಟುಂಬಸ್ಥರು ಹಾಗೂ ಸ್ನೇಹಿತರೊಂದಿಗೆ ದೇವಿಯ ದರ್ಶನ ಮುಗಿಸಿಕೊಂಡ ಬಳಿಕ ಸೇತುವೆ ವೀಕ್ಷಣೆಗಾಗಿ ತೆರಳಿದ್ದ ಉಮೇಶ್, ಬಳಿಕ ಈಜಲು ನೀರಿಗೆ ಇಳಿದ ವೇಳೆ ಆಕಸ್ಮಿಕವಾಗಿ ಮುಳುಗಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ನದಿಯಿಂದ ಹೊರತೆಗೆದಿದ್ದಾರೆ.
ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.



