Home India News ಕುಂಭಮೇಳಕ್ಕೆ ತೆರಳಿದ್ದ ಬೀದರ್‌ ಮೂಲದ ವ್ಯಕ್ತಿ ಹೃದಯಾಘಾತದಿಂದ ಸಾವು!

ಕುಂಭಮೇಳಕ್ಕೆ ತೆರಳಿದ್ದ ಬೀದರ್‌ ಮೂಲದ ವ್ಯಕ್ತಿ ಹೃದಯಾಘಾತದಿಂದ ಸಾವು!

0
ಕುಂಭಮೇಳಕ್ಕೆ ತೆರಳಿದ್ದ ಬೀದರ್‌ ಮೂಲದ ವ್ಯಕ್ತಿ ಹೃದಯಾಘಾತದಿಂದ ಸಾವು!
Spread the love

ಬೀದರ್:‌ ಇತ್ತೀಚೆಗೆ ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳ ದಲ್ಲಿ ಭಾಗವಹಿಸಿ ವಾಪಸ್ ಬರುವ ವೇಳೆ ರೈಲಿನಲ್ಲಿ ಹೃದಯಾಘಾತದಿಂದ ಬೆಳಗಾವಿಯ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿತ್ತು.

ಇದೀಗ ಮಹಾಕುಂಭಮೇಳಕ್ಕೆ ಭೇಟಿ ನೀಡಿ, ವಾಪಸ್ಸಾಗುತ್ತಿರುವಾಗ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕಾಶಿಯಲ್ಲಿ ನಡೆದಿದೆ. ಕಂಟೆಪ್ಪಾ ಜಿರ್ಗೆ (65) ಮೃತ ದುರ್ಧೈವಿಯಾಗಿದ್ದು, ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಠಾಣಾಕುಶನೂರು ಗ್ರಾಮದ ಮುಖಂಡನಾಗಿದ್ದರು.

ಮೃತ ವ್ಯಕ್ತಿ ಹಲವು ದಿನಗಳ ಹಿಂದೆ ಮಹಾಕುಂಭಮೇಳಕ್ಕೆ ಕುಟುಂಬದ ಜೊತೆಗೆ ಹೋಗಿದ್ದರು. ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳ ಮುಗಿಸಿಕೊಂಡು ಬೀದರ್‌ಗೆ ಹಿಂದಿರುಗುತ್ತಿದ್ದಾಗ ಉತ್ತರಪ್ರದೇಶದ ಕಾಶಿಯಲ್ಲಿ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಬಳಿಕ ಆಸ್ಪತ್ರೆಗೆ ಸೇರಿಸಿದಾಗ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

 


Spread the love

LEAVE A REPLY

Please enter your comment!
Please enter your name here