ಬೆಂಗಳೂರು: ಮೆಟ್ರೋ ಟ್ರ್ಯಾಕ್ ಮೇಲೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ!

0
Spread the love

ಬೆಂಗಳೂರು: ಮೆಟ್ರೋ ಟ್ರ್ಯಾಕ್​ ಮೇಲೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಬಿಹಾರ ಮೂಲದ ಸಿದ್ಧಾರ್ಥ್(30)​ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಮೆಟ್ರೋ ರೈಲು ಸಂಚಾರ ಬಂದ್ ಮಾಡಿದ ಮೆಟ್ರೋ ಸಿಬ್ಬಂದಿ ವ್ಯಕ್ತಿಯನ್ನು ರಕ್ಷಣೆ ಮಾಡಿದ್ದಾರೆ. ವೈಟ್​​ಫೀಲ್ಡ್​ ಕಡೆಯಿಂದ ಕೆಂಗೇರಿ ಕಡೆಗೆ ಮೆಟ್ರೋ ರೈಲು ತೆರಳುತ್ತಿತ್ತು. ಈ ವೇಳೆ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ಸಿದ್ದಾಥ್​ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

Advertisement

ಮೆಟ್ರೋ ನಡುವೆ ಸಿಲುಕಿದ ಕಾರಣ ಜೀವಕ್ಕೆ ತೊಂದರೆಯಾಗಿಲ್ಲ. ರೈಲ್ವೆ ಚಾಲಕರು ವೇಗವನ್ನು ಗಣನೀಯವಾಗಿ ತಗ್ಗಿಸಿದ್ದರು. ತಕ್ಷಣವೇ ರೈಲು ಸಂಚಾರ ಬಂದ್ ಮಾಡಿ ಈ ವ್ಯಕ್ತಿಯನ್ನು ರಕ್ಷಿಸಿ ಕರೆದುಕೊಂಡು ಹೋಗಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಯಾವುದೇ ಗಾಯಗಳು ವರದಿಯಾಗಿಲ್ಲ. ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ಸಿದ್ದಾರ್ಥ ನನ್ನು ಜ್ಞಾನಭಾರತಿ ಸ್ಟೇಷನ್ ಪೋಲಿಸರು ವಶಕ್ಕೆ ಪಡೆದುಕೊಂಡಿದ್ದು, ಸದ್ಯ ವಿಚಾರಣೆ ಮಾಡುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here