ಬೆಳಗಾವಿ:– ಭಾರೀ ಮಳೆ ಹಿನ್ನೆಲೆ ರಭಸವಾಗಿ ಹರಿಯುವ ಹಳ್ಳದ ನೀರಿನಲ್ಲಿ ವ್ಯಕ್ತಿಯೋರ್ವ ಕೊಚ್ಚಿ ಹೋದ ಘಟನೆ ಬೆಳಗಾವಿ ತಾಲೂಕಿನ ತಾರಿಹಾಳ ಗ್ರಾಮದ ಹೊರವಲಯದಲ್ಲಿ ಜರುಗಿದೆ.
Advertisement
ಹಳ್ಳ ದಾಟುವಾಗ ಬೈಕ್ ಸಮೇತ ವ್ಯಕ್ತಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ತಾರಿಹಾಳ ಗ್ರಾಮದ ಸುರೇಶ್ ಗುಂಡನ್ನವರ(50) ನಾಪತ್ತೆಯಾದವ.
ಪಂಚಾಯತಿಯಲ್ಲಿ ಕೆಲಸ ಮಾಡುತ್ತಿದ್ದ ಈತ, ಅಂದು ರಾತ್ರಿ ಕೆಲಸ ಮುಗಿಸಿ ವಾಪಸ್ ಮನೆಗೆ ಹೋಗುವಾಗ ಈ ಘಟನೆ ಸಂಭವಿಸಿದೆ. ಇದೀಗ ಬೈಕ್ ಸಮೇತ ಕೊಚ್ಚಿಕೊಂಡು ಹೋಗಿರುವ ವ್ಯಕ್ತಿಯ ಶೋಧ ಕಾರ್ಯಾಚರಣೆಗೆ ಪೊಲೀಸರು ಮುಂದಾಗಿದ್ದಾರೆ. ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.