ಮೈಸೂರು: ನಂಜನಗೂಡು ತಾಲೂಕಿನ ಚನ್ನಪಟ್ಟಣ ಗ್ರಾಮದಲ್ಲಿ ಬಹಿಷ್ಕಾರಕ್ಕೆ ಮನನೊಂದು ವ್ಯಕ್ತಿಯೋರ್ವ ಮದ್ಯದಲ್ಲಿ ಮಾತ್ರೆ ಬೆರೆಸಿ ಕುಡಿದು ಆತ್ಮಹತ್ಯೆಗೆ ಶರಣಾದ ಘಟನೆ ಜರುಗಿದೆ.
48 ವರ್ಷದ ಸ್ವಾಮಿ ಮೃತ ವ್ಯಕ್ತಿ. ಒಂದು ವರ್ಷದ ಹಿಂದೆ ಗ್ರಾಮ ಪಂಚಾಯಿತಿ ಚುನಾವಣೆ ಸಮಯದಲ್ಲಿ ಕ್ಷುಲ್ಲಕ ಕಾರಣಕ್ಕೆ ಗ್ರಾಮದ ಮುಖಂಡರು ನಮಗೆ ಬಹಿಷ್ಕಾರ ಹಾಕಿದ್ದರು. ಒಂದು ಲಕ್ಷ ದಂಡ ಕಟ್ಟಿದರೆ ಮಾತ್ರ ಬಹಿಷ್ಕಾರ ವಾಪಸ್ಸು ಎಂದು ಹೇಳಿದ್ದರು.
ಈ ಹಿನ್ನಲೆ ಕಳೆದ ಒಂದು ವರ್ಷದಿಂದ ಗ್ರಾಮದ ಹೊರ ವಲಯದಲ್ಲಿ ನಮ್ಮ ಕುಟುಂಬ ವಾಸವಿತ್ತು. ಬಹಿಷ್ಕಾರದಿಂದ ಮನನೊಂದು ಮದ್ಯದಲ್ಲಿ ಮಾತ್ರೆ ಬೆರೆಸಿ ಕುಡಿದು ನನ್ನ ಮಗ ಸ್ವಾಮಿ ಅತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಮೃತನ ತಾಯಿ ತಿಮ್ಮಮ್ಮ ಎನ್ನುವವರು ಗಂಭೀರ ಆರೋಪ ಮಾಡಿದ್ದು,
ಈ ಕುರಿತು ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.



