ಶಿವಮೊಗ್ಗ:- ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಗ್ರಾಮದ ರೈಲ್ವೇ ನಿಲ್ದಾಣದ ಬಳಿಯಲ್ಲಿ ಅಮಾನವೀಯ ಘಟನೆಯೊಂದು ಜರುಗಿದೆ.
Advertisement
ಓರ್ವ ವ್ಯಕ್ತಿ ಬೀದಿ ನಾಯಿಯನ್ನು ಅಮಾನುಷವಾಗಿ ಹೊಡೆದು ಕೊಂದು ಆಟೋದಲ್ಲಿ ಎಳೆದುಕೊಂಡು ಹೋಗಿರುವಂತಹ ಘಟನೆ ಜರುಗಿದೆ. ಆಟೋ ಚಾಲಕ ವಾಜೀದ್ ನಿಂದ ಈ ಕೃತ್ಯ ನಡೆದಿದೆ.
ಘಟನೆ ಹಿನ್ನೆಲೆ:-
ಮಲಗಿದ್ದ ನಾಯಿ ಮೇಲೆ ಆರೋಪಿ ವಾಜೀದ್ ದೊಡ್ಡ ಗಾತ್ರದ ಕಲ್ಲನ್ನು ಎತ್ತಿ ಹಾಕುತ್ತಾನೆ. ಆಗ ನಾಯಿ ಕಿರುಚುತ್ತಾ ಅಲ್ಲೇ ಕುಸಿದು ಬೀಳುತ್ತದೆ. ಅಷ್ಟಕ್ಕೇ ಸುಮ್ಮನಾಗದ ಆರೋಪಿ ಮತ್ತೊಮ್ಮೆ ಅದೇ ಕಲ್ಲನ್ನು ಎತ್ತಿ ತಲೆ ಮೇಲೆ ಹಾಕಿದ್ದಾನೆ. ಇದರಿಂದ ಅರ್ಧ ಜೀವವಾದ ನಾಯಿ ಅಲ್ಲೇ ನರಳಾಡುತ್ತಿರುತ್ತದೆ. ಅಲ್ಲಿಂದ ಸ್ವಲ್ಪ ದೂರಕ್ಕೆ ಹೋದ ಆರೋಪಿ ಮತ್ತೊಮ್ಮೆ ಹಿಂದಿರುಗಿ ಬಂದು ಇನ್ನಷ್ಟೂ ಕ್ರೂರವಾಗಿ ಅದೇ ಕಲ್ಲನ್ನು ಮತ್ತೆ ನಾಯಿಯ ತಲೆ ಮೇಲೆ ಹಾಕಿದ ರಭಸಕ್ಕೆ ನಾಯಿ ಸ್ಥಳದಲ್ಲಿಯೇ ಪ್ರಾಣಬಿಟ್ಟಿದೆ.


