ಪುಣೆ:- ವ್ಯಕ್ತಿಯೊಬ್ಬ ಸಣ್ಣ ಜಗಳಕ್ಕೆ ಗೆಳತಿಯನ್ನು ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪುಣೆಯಲ್ಲಿ ಜರುಗಿದೆ.
20 ವರ್ಷದ ದಿವ್ಯಾ ನಿಗೋಟ್ ಮೃತ ಯುವತಿ. ಗಣೇಶ್ ಕೇಲ್ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಆರೋಪಿ. ಇಬ್ಬರೂ ಪುಣೆಯ ರೂಬಿ ಹಾಲ್ ಕ್ಲಿನಿಕ್‌ನಲ್ಲಿ ಕೆಲಸ ಮಾಡುತ್ತಿದ್ದರು. ಆ ವ್ಯಕ್ತಿ ಟೆಕ್ನಿಷಿಯನ್ ಆಗಿದ್ದ, ಯುವತಿ ಅದೇ ಕ್ಲಿನಿಕ್‌ನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಳು.
ದಿವ್ಯಾ ಅವರ ಕುಟುಂಬವು ನಾಪತ್ತೆ ದೂರು ದಾಖಲಿಸಿತ್ತು. ಶೋಧ ಕಾರ್ಯಾಚರಣೆಯ ಸಮಯದಲ್ಲಿ, ಸಂಗಮವಾಡಿ ಪ್ರದೇಶದ ವ್ಯಕ್ತಿಯ ಮನೆಯಲ್ಲಿ ದಿವ್ಯಾ ಅವರ ಮೃತದೇಹ ಪತ್ತೆಯಾಗಿದೆ. ತಲೆಗಾಂವ್ ರೈಲ್ವೆ ಹಳಿಯ ಬಳಿ ಆ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ದಿವ್ಯಾಳ ಮೂಗು ಮತ್ತು ಮುಖದ ಮೇಲೆ ಗಾಯದ ಗುರುತುಗಳಿವೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


