ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ. ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಶಿಲೀಂಧ್ರದೊಡ್ಡಿ ಬಳಿ ಘಟನೆ ನಡೆದಿದೆ. ಬೆಂಗಳೂರಿನ ಕೊಣನಕುಂಟೆ ನಿವಾಸಿ ಅಮರನಾಥ (43) ಮೃತ ದುರ್ದೈವಿ.
ಅಮರನಾಥ ಹೊಸ ಪಂಚೆ ಖರೀದಿಸಿ ಅದರಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.



