ಸ್ಲಂ, ಬಡಜನರಿಗೆ ವಸತಿ ಹಕ್ಕು ಕಾಯ್ದೆ ಜಾರಿ : ಹೆಚ್.ಕೆ.ಪಾಟೀಲ

0
A mass convention of proletarians
Spread the love

ವಿಜಯಸಾಕ್ಷಿ ಸುದ್ದಿ, ಗದಗ : ರಾಜ್ಯದಲ್ಲಿ ಸ್ಲಂ ಜನರ ವಸತಿ ಮತ್ತು ಕೊಳಗೇರಿಗಳ ಅಭಿವೃದ್ಧಿಗಾಗಿ ನಮ್ಮ ಸರ್ಕಾರದಿಂದ ಸಾಕಷ್ಟು ಅನುದಾನ ನೀಡಿದ್ದೇವೆ. ಸ್ಲಂ ಪ್ರದೇಶದ ಕುಟುಂಬಗಳಿಗೆ ಭೂ ಮಾಲೀಕತ್ವ ನೀಡುವ ಉದ್ದೇಶದಿಂದ 3.52 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಣೆ ಮಾಡಲಾಗುತ್ತಿದ್ದೆ. ರಾಜ್ಯದ ಸ್ಲಂ ನಿವಾಸಿಗಳ ಭೂ ಮಾಲಿಕತ್ವ ಸಿಗುತ್ತಿದೆ. ರಾಜ್ಯದಲ್ಲಿ ಈಗಾಗಲೇ ಸ್ಲಂ ಜನರಿಗೆ ಮತ್ತು ಬಡಜನರಿಗೆ ವಸತಿ ಹಕ್ಕು ಕಾಯ್ದೆ ಜಾರಿಗೆ ತರಲು ಎಲ್ಲಾ ಸಿದ್ಧತೆಗಳನ್ನು ನಮ್ಮ ಸರ್ಕಾರದಿಂದ ಜಾರಿಗೆ ತರಲಾಗುವುದೆಂದು ಸಚಿವ ಹೆಚ್.ಕೆ. ಪಾಟೀಲ ಭರವಸೆ ನೀಡಿದರು.

Advertisement

ಅವರು ನಗರದ ಡಾ.ಬಾಬು ಜಗಜೀವನರಾವ ಕಲ್ಯಾಣ ಮಂಟಪದಲ್ಲಿ ಸ್ಲಂ ಜನಾಂದೋಲನ-ಕರ್ನಾಟಕ ಮತ್ತು ಗದಗ ಜಿಲ್ಲಾ ಸ್ಲಂ ಸಮಿತಿಯಿಂದ ಹಮ್ಮಿಕೊಂಡಿದ್ದ ಶ್ರಮಜೀವಿಗಳ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಚುನಾವಣಾ ಪೂರ್ವದಲ್ಲಿ ರಾಜ್ಯದ ಬಡ ಜನತೆಗೆ ನೀಡಿದ ಪಂಚ ಗ್ಯಾರಂಟಿಗಳನ್ನು ನಾವು ಜಾರಿಗೆ ತಂದಿದ್ದೇವೆ. ರಾಜ್ಯದ ಜನರು ನಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರದಿಂದ ಬಡ ಜನರ ಪರವಾಗಿ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ.

ಮುಂದಿನ ದಿನಗಳಲ್ಲಿ ಅಸಂಘಟಿತ ಕಾರ್ಮಿಕರ ಪರವಾಗಿ ಕಲ್ಯಾಣ ಮಂಡಳಿಯನ್ನಯನ್ನು ಜಾರಿಗೆ ತಂದು ಸಾಮಾಜಿಕ ಭದ್ರತೆಯನ್ನು ನೀಡುವ ಮೂಲಕ ಶ್ರಮಜೀವಿಗಳ ಸ್ವಾಭಿಮಾನವನ್ನು ಎತ್ತರಕ್ಕೇರಿಸುವ ಕೆಲಸ ಸರ್ಕಾರ ಮಾಡುತ್ತದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ ಆರ್.ಮಾನ್ವಿ ವಹಿಸಿದ್ದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಗದಗ ಜಿಲ್ಲಾ ಸ್ಲಂ ಸಮಿತಿ ಉಪಾಧ್ಯಕ್ಷ ಅಶೋಕ ಕುಡತಿನ್ನಿ, ಸ್ಲಂ ಜನಾಂದೋಲನ-ಕರ್ನಾಟಕ ಸಂಘಟನಾ ಸಂಚಾಲಕ ಜನಾರ್ಧನ ಹಳ್ಳಿಬೆಂಚಿ, ಸಾವಿತ್ರಿಬಾ ಫುಲೆ ಮಹಿಳಾ ಸಮಿತಿ ಸಂಚಾಲಕಿ ಶೋಭಾ ಕಮತರ, ಜಿಲ್ಲಾ ದ.ಸಂ.ಸ ಸಂಚಾಲಕ ವೆಂಕಟೇಶಯ್ಯ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರಭು ಬುರಬುರೆ, ಸ್ಲಂ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ ಕುಸಬಿ, ಮಹಿಳಾ ಸಮಿತಿ ಸಂಚಾಲಕಿ ಪರವೀನಬಾನು ಹವಾಲ್ದಾರ, ಮುಖಂಡರಾದ ಇಬ್ರಾಹಿಂ ಮುಲ್ಲಾ, ಶರಣಪ್ಪ ಸೂಡಿ, ಮೆಹರುನಿಸಾ ಡಂಬಳ ದುರ್ಗಪ್ಪ ನವಲಗುಂದ, ಎಸ್.ಎನ್. ಬಳ್ಳಾರಿ, ಬಸವರಾಜ ಕಡೇಮನಿ ವೇದಿಕೆಯ ಮೇಲೆ ಉಪಸ್ಥಿತರಿದ್ದರು.

ಪಂಚ ಗ್ಯಾರಂಟಿಗಳ ಜೊತೆಯಲ್ಲಿ ಸ್ಲಂ ಜನರಿಗೆ ವಸತಿ ಯೋಜನೆಗೆ 6200 ಕೋಟಿ ರೂ.ಗಳನ್ನು ಈ ಸರ್ಕಾರ ನೀಡುವ ಮೂಲಕ 6ನೇ ಗ್ಯಾರಂಟಿಯನ್ನು ನೀಡಿದೆ. ಬಡಜನರಿಗೆ ನೀಡಿರುವ ಗ್ಯಾರಂಟಿಗಳನ್ನು ಗೇಲಿ ಮಾಡುವ ಬಿಜೆಪಿ ಪಕ್ಷ ಶ್ರೀಮಂತರ 3.50 ಲಕ್ಷ ಕೋಟಿ ರೂ ತೆರಿಗೆ ಹಣವನ್ನು ಮನ್ನಾ ಮಾಡಿದೆ. ರಾಜ್ಯದಲ್ಲಿ ನಿವೇಶನರಹಿತರ ಸಮಸ್ಯೆ ಪರಿಹಾರಕ್ಕೆ ವಸತಿ ಹಕ್ಕು ಕಾಯ್ದೆ ಜಾರಿ ಮಾಡುವ ಜೊತೆಗೆ ಲ್ಯಾಂಡ್ ಬ್ಯಾಂಕ್ ಯೋಜನೆಯನ್ನು ಜಾರಿಗೊಳಿಸಿ ಹೊಸ ಕ್ರಿಮಿನಲ್ ಕಾನೂನುಗಳ ಮೂಲಕ ಸನಾತನ ಕಾನೂನುಗಳನ್ನು ಪುನಃ ಜಾರಿಗೊಳಿಸಲು ಒಕ್ಕೂಟ ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ಇದರ ಸಾಧಕ-ಬಾಧಕಗಳನ್ನು ಪರಿಶೀಲಿಸಿ ಹೊಸ ಕಾನೂನುಗಳನ್ನು ಜಾರಿಗೊಳಿಸಬೇಕೆಂದು ಸಚಿವ ಎಚ್.ಕೆ. ಪಾಟೀಲ ಹೇಳಿದರು.

 


Spread the love

LEAVE A REPLY

Please enter your comment!
Please enter your name here