ಪಟ್ಟಣದ ಅಭಿವೃದ್ಧಿಗೆ ಸಹಕಾರ ನೀಡಿ : ಎಸ್.ಎಸ್. ಬೀಳಗಿ

0
A meeting of street traders
Spread the love

ವಿಜಯಸಾಕ್ಷಿ ಸುದ್ದಿ, ರೋಣ : ಪಟ್ಟಣದ ಅಭಿವೃದ್ಧಿ ಹಾಗೂ ಸೌಂದರ್ಯದ ದೃಷ್ಟಿಯಿಂದ ರಸ್ತೆ ಅಗಲೀಕರಣ ಅತ್ಯಗತ್ಯವಾಗಿದ್ದು, ವ್ಯಾಪಾರಸ್ಥರ ಮತ್ತು ಸಾರ್ವಜನಿಕರ ಸಹಕಾರ ಅವಶ್ಯಕವಾಗಿದೆ ಎಂದು ಸಿಪಿಐ ಎಸ್.ಎಸ್. ಬೀಳಗಿ ಹೇಳಿದರು.

Advertisement

ಅವರು ಗುರುವಾರ ಪೊಲೀಸ್ ಠಾಣೆಯಲ್ಲಿ ಬೀದಿಬದಿ ವ್ಯಾಪಾರಸ್ಥರ ಸಭೆಯನ್ನು ಆಯೋಜಿಸಿ ಮಾತನಾಡಿದರು.
ರೋಣ ಪಟ್ಟಣ ಅಭಿವೃದ್ಧಿಯತ್ತ ಸಾಗಬೇಕು ಎನ್ನುವುದು ಎಲ್ಲರ ಇಚ್ಛೆಯಾಗಿದ್ದು, ರಸ್ತೆ ಅಗಲೀಕರಣವಾದಾಗ ಮಾತ್ರ ಶಹರ ಪ್ರದೇಶಗಳು ಪ್ರಗತಿಯತ್ತ ಸಾಗಲು ಅನುಕೂಲವಾಗುತ್ತದೆ. ಇಂತಹ ಸಂದರ್ಭಗಳಲ್ಲಿ ಸಮಸ್ಯೆಗಳು ಉದ್ಭವಿಸುವುದು ಸಹಜವಾದರೂ, ಅಭಿವೃದ್ಧಿಗೆ ಕೈಜೋಡಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ ಎನ್ನುವುದನ್ನು ಮರೆಯಬಾರದು ಎಂದರು.

ಮುಖ್ಯವಾಗಿ ರಸ್ತೆ ಅಗಲೀಕರಣದ ಸಮಯದಲ್ಲಿ ಬೀದಿಬದಿ ವ್ಯಾಪರಸ್ಥರಿಗೆ ವಹಿವಾಟು ನಡೆಸಲು ಬೇರೆ ಕಡೆಗಳಲ್ಲಿ ಸ್ಥಳಾವಕಾಶ ಮಾಡಿಕೊಡಲು ಈಗಾಗಲೇ ಸಿದ್ಧತೆ ಮಾಡಲಾಗಿದೆ ಎಂಬುದನ್ನು ವಿವರಿಸಿದ ಅವರು, ಇನ್ನುಮುಂದೆ ನಿಯಮಗಳನ್ನು ಮೀರಿ ಯಾರೂ ನಡೆದುಕೊಳ್ಳುವಂತಿಲ್ಲ ಎಂಬ ಸೂಚನೆಯನ್ನು ನೀಡಿದರು.

ಸಭೆಯ ನಂತರ ಸಿಪಿಐ ಎಸ್.ಎಸ್. ಬಿಳಗಿಯವರು ಎಲ್ಲ ಅಂಗಡಿಗಳ ಮಾಲಿಕರಿಗೆ ರಸ್ತೆ ಬದಿಯಲ್ಲಿಟ್ಟಿರುವ ವಸ್ತುಗಳನ್ನು ತೆಗೆದುಕೊಳ್ಳಬೇಕು ಹಾಗೂ ರಸ್ತೆ ಅಗಲೀಕರಣ ಸಂದರ್ಭದಲ್ಲಿ ಸಹಕಾರ ನೀಡಬೇಕು ಎಂದು ಸಲಹೆ ನೀಡಿದರು. ಇದೇ ಸಂಧರ್ಭದಲ್ಲಿ ವಾಹನ ಸವಾರರಿಗೆ ರಸ್ತೆ ನಿಯಮಗಳನ್ನು ಪಾಲಿಸಬೇಕು ಹಾಗೂ ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುವಂತಿಲ್ಲ ಎಂಬ ಎಚ್ಚರಿಕೆಯನ್ನು ನೀಡಿದರು. ಈ ಸಂದರ್ಭದಲ್ಲಿ ಪಿಡಬ್ಲುಡಿ, ಪುರಸಭೆಯ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here