ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಹರಿಹರ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳ 6ನೇ ವರ್ಷದ ಪೀಠಾರೋಹಣ ಸಮಾರಂಭದ ಅಂಗವಾಗಿ ಏ.14ರ ಬೆಳಿಗ್ಗೆ 10ಕ್ಕೆ ಪಟ್ಟಣದ ಎಸ್‌ಬಿಐ ಬ್ಯಾಂಕಿನ ಮೇಲಿನ ಎಪಿಎಂಸಿ ವರ್ತಕರ ಸಭಾಭವನದಲ್ಲಿ ಭಕ್ತರ ಮತ್ತು ಸಮಾಜ ಬಾಂಧವರ ಪೂರ್ವಭಾವಿ ಸಭೆ ಜರುಗುವುದು.
ಸಭೆಯ ಸಾನ್ನಿಧ್ಯವನ್ನು ಶ್ರೀ ವಚನಾನಂದ ಮಹಾಸ್ವಾಮಿಗಳು ವಹಿಸುವರು. ಪಟ್ಟಣ ಸೇರಿ ತಾಲೂಕಿನ ಎಲ್ಲ ಗ್ರಾಮಗಳ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಲಹೆ-ಸೂಚನೆಗಳನ್ನು ನೀಡಿ ಸಭೆಯನ್ನು ಯಶಸ್ವಿಗೊಳಿಸಬೇಕು ಎಂದು ಲಕ್ಷ್ಮೇಶ್ವರ ತಾಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ತಾಲೂಕಾಧ್ಯಕ್ಷ ಮಂಜುನಾಥ ಮಾಗಡಿ ತಿಳಿಸಿದ್ದಾರೆ.



