HomeGadag Newsನೋಂದಣಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ : ವೈಶಾಲಿ ಎಂ.ಎಲ್

ನೋಂದಣಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ : ವೈಶಾಲಿ ಎಂ.ಎಲ್

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : 2023-24ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಎಫ್‌ಎಕ್ಯೂ ಗುಣಮಟ್ಟದ ಕುಸುಬೆ ಉತ್ಪನ್ನವನ್ನು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಭವನದಲ್ಲಿ 2023-24ನೇ ಸಾಲಿನ ಹಿಂಗಾರು ಹಂಗಾಮಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕುಸುಬೆ ಹುಟ್ಟುವಳಿ ಖರೀದಿಸುವ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರದ ಮಾನದಂಡಗಳನ್ವಯ ಎಫ್‌ಎಕ್ಯೂ ಗುಣಮಟ್ಟವನ್ನು ದೃಢೀಕರಿಸಲು ಕ್ರಮ ವಹಿಸಬೇಕು. ಖರೀದಿ ಏಜೆನ್ಸಿಯವರು ತಮ್ಮ ಸಂಸ್ಥೆಯ ಹಿರಿಯ ಅಧಿಕಾರಿಗಳು ಮೇಲುಸ್ತುವಾರಿ ತಪಾಸಣೆ ಕೈಗೊಳ್ಳಬೇಕು. ಪ್ರತಿ ಖರೀದಿ ಕೇಂದ್ರಕ್ಕೆ ಗ್ರೇಡರ್‌ಗಳನ್ನು ನೇಮಿಸಬೇಕು. ಜಿಲ್ಲೆಯ ಪ್ರತಿ ರೈತರಿಂದ ಎಕರೆಗೆ 5 ಕ್ವಿಂಟಲ್‌ನಂತೆ ಗರಿಷ್ಟ 15 ಕ್ವಿಂಟಲ್ ಎಫ್‌ಎಕ್ಯೂ ಗುಣಮಟ್ಟದ ಕುಸುಬೆ ಖರೀದಿಸಲು ಹಾಗೂ ಖರೀದಿ ಸಂಸ್ಥೆಗಳು ಯಾವುದೇ ರೀತಿಯ ದುರುಪಯೋಗ ಆಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಸೂಚಿಸಿದರು.

ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು ಮಾತನಾಡಿ, ಎಫ್‌ಎಕ್ಯೂ ಗುಣಮಟ್ಟದ ಕುಸುಬೆ ಹುಟ್ಟುವಳಿಗೆ ಪ್ರತಿ ಕ್ವಿಂಟಾಲ್‌ಗೆ ರೂ.5800ರಂತೆ ಬೆಲೆ ನಿಗದಿಪಡಿಸಲಾಗಿದೆ. ಕೇಂದ್ರ ಸರ್ಕಾರದ ಆದೇಶ ದಿನಾಂಕ 1-7-2024ರನುಸಾರ ನ್ಯಾಪೆಡ್ ಸಂಸ್ಥೆಯನ್ನು ಕೇಂದ್ರದ ಖರೀದಿ ಏಜೆನ್ಸಿಯಾಗಿ ಮತ್ತು ಇವರನ್ನು ರಾಜ್ಯ ಮಟ್ಟದ ಖರೀದಿ ಏಜೆನ್ಸಿಯನ್ನಾಗಿ ನೇಮಿಸಿದ್ದು, ರೈತರು ನೋಂದಣಿ ಕಾಲಾವಧಿಯನ್ನು ಆದೇಶದ ದಿನಾಂಕದಿಂದ 45 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನೋಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆಯನ್ನು ಜರುಗಿಸಲಾಗುವುದು ಎಂದರು.

ಜಿಲ್ಲೆಯ 10 ಕಡೆ ಖರೀದಿ ಕೇಂದ್ರಗಳನ್ನು ತೆರೆಯಲು ತೀರ್ಮಾನಿಸಲಾಯಿತು. ಸಭೆಯಲ್ಲಿ ಕೃಷಿ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ತೋಟಗಾರಿಕೆ ಇಲಾಖೆ, ಸಹಕಾರಿ ಸಂಘಗಳ ಇಲಾಖೆಯ ಕೆ.ಓ.ಎಫ್. ವ್ಯವಸ್ಥಾಪಕರು ಹಾಜರಿದ್ದರು.

10 ಕುಸುಬೆ ಖರೀದಿ ಕೇಂದ್ರಗಳು

ಗದಗ ತಾಲೂಕು-ಬಳಗಾನೂರ, ಹೊಂಬಳ, ಮುಳಗುಂದ, ಶಿರಹಟ್ಟಿ ತಾಲೂಕು-ರಣತೂರ, ಮಾಗಡಿ, ರೋಣ ತಾಲೂಕು- ಅಬ್ಬಿಗೇರಿ, ಸೂಡಿ, ನಿಡಗುಂದಿ, ಮುಂಡರಗಿ ತಾಲೂಕು- ಬರದೂರ, ನರಗುಂದ ತಾಲೂಕು- ಕಣಕಿಕೊಪ್ಪ.

 


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!