ಗುಣಮಟ್ಟದ ಶಿಕ್ಷಣ ನೀಡುವಲ್ಲಿ ರಾಜ್ಯಕ್ಕೆ ಮಾದರಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಸಿದ್ಧಲಿಂಗ ನಗರದ ಸರಕಾರಿ ಪ್ರೌಢಶಾಲೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ದಂಪತಿಗಳು ದತ್ತು ಪಡೆದ ಮೇಲೆ ಎಲ್ಲ ಮೂಲಭೂತ ಸೌಕರ್ಯಗಳನ್ನು ಹೊಂದಿ, ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ರಾಜ್ಯಕ್ಕೆ ಮಾದರಿಯಾಗಿ ಬೆಳೆದು ನಿಂತಿರುವುದು ಗದಗ ಜಿಲ್ಲೆಗೆ ಹೆಮ್ಮಯ ಸಂಗತಿ ಎಂದು ಗದಗ-ಬೆಟಗೇರಿ ನಗರಸಭೆಯ ಸದಸ್ಯೆ ವಿದ್ಯಾವತಿ ಗಡಗಿ ಅಭಿಪ್ರಾಯಟ್ಟರು.

Advertisement

ಅವರು ಸಿದ್ಧಲಿಂಗ ನಗರದ ಸರಕಾರಿ ಪ್ರೌಢಶಾಲೆಯಲ್ಲಿ ಗದಗ-ಬೆಟಗೇರಿ ನಗರಸಭೆಯ ಅನುದಾನದ ಅಡಿಯಲ್ಲಿ ನಿರ್ಮಾಣಗೊಳ್ಳಲಿರುವ ಶಾಲೆಯ ಮುಂಭಾಗಕ್ಕೆ ಫೇವರ್ಸ್ ಜೋಡಣೆಯ ಭೂಮಿ ಪೂಜಾ ಸಮಾರಂಭದಲ್ಲಿ ಪೂಜೆ ನೆರವೇರಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಡಾ. ಬಸವರಾಜ ಧಾರವಾಡ, ಡಿ.ಡಿ.ಪಿ.ಐ. ಆರ್.ಎಸ್. ಬುರಡಿ, ಕ್ಷೇತ್ರ ಶಿಕ್ಷಣಾಧಿಕಾರಿ ರವೀಂದ್ರ ಶೆಟ್ಟೆಪ್ಪನವರ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ರೇಣುಕಾ ರೋಣದ, ಸದಸ್ಯರಾದ ಶಿವಪ್ಪ ಶಿವಶಿಂಪಿಗೇರ, ಯುವ ಉದ್ಯಮಿ ಕಿರಣ ಭೂಮಾ, ಎಸ್.ಎಂ. ಅಗಡಿ, ಪಿ.ಆರ್. ಇನಾಮದಾರ, ನಿವೃತ್ತ ಶಿಕ್ಷಕ ಕುಬೇರ, ಕ.ರ.ವೇ ಅಧ್ಯಕ್ಷರಾದ ನಿಂಗನಗೌಡ ಮಾಲಿಪಾಟೀಲ, ಗುತ್ತಿಗೆದಾರ ವಾಸಿಂ ಕುನ್ನಿಭಾವಿ, ಪ್ರಭಾರಿ ಮುಖ್ಯೋಪಾಧ್ಯಾಯರಾದ ಜಯಲಕ್ಷ್ಮಿ ಅಣ್ಣಿಗೇರಿ, ಶಂಕ್ರಮ್ಮ ಆರ್.ಹಣಮಗೌಡ್ರು, ಎಂ.ಐ. ಶಿವನಗೌಡ್ರು, ಮಂಜುಳಾ. ಪಿ.ಸಾಮ್ರಾಣಿ, ಸುಮಂಗಲಾ ಎಂ.ಪತ್ತಾರ್, ಶಾರದಾ ಬಾಣದ, ಶೋಭಾ ಎಸ್.ಗಾಳಿ, ರಮೇಶ್ ಬಸರಿ, ಸಾವಿತ್ರಿ ಎ.ಗದ್ದನಕೇರಿ, ಎನ್.ಆರ್. ಶಿರೋಳ್, ಸಬಿಯಾ ಯು.ಕುಷ್ಟಗಿ, ಗಂಗಾ ಎಂ.ಅಳವಂಡಿ, ಮಂಜುಳಾ ಟಿ, ಶಶಿಕಲಾ ಬಿ.ಗುಳೇದವರ, ಪದ್ಮಾ ವಿ.ದಾಸರ್, ಲಕ್ಷ್ಮಮ್ಮ ಮಾಳೋತ್ತರ್, ಶಾರದಾ ಬಾಣದ ಮುಂತಾದವರು ಉಪಸ್ಥಿತರಿದ್ದರು. ಸಂಜೀವಿನಿ ಕೂಲಗುಡಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಕೇವಲ ಎರಡು ವರ್ಷಗಳಲ್ಲಿ ಈ ಶಾಲೆ ಎಲ್ಲ ಅಭಿವೃದ್ಧಿಗಳನ್ನು ಹೊಂದುವ ಮೂಲಕ ಗ್ರಾಮೀಣ ಬಡ, ಪ್ರತಿಭಾವಂತ ವಿದ್ಯಾರ್ಥಿಗಳ ಅಕ್ಷರದ ಹಸಿವನ್ನು ನೀಗಿಸುತ್ತಿದೆ. ಖಾಸಗಿ ಶಾಲೆಗಿಂತ ಯಾವುದಕ್ಕೂ ಕಡಿಮೆ ಇಲ್ಲದೆ ಇಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ. ಇಲ್ಲಿರುವ ಎಲ್ಲ ಪ್ರತಿಭಾವಂತ ಶಿಕ್ಷಕರು ಇಲ್ಲಿನ ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಷ್ಟೇ ಕಾಳಜಿ ಮಾಡುತ್ತಿದ್ದಾರೆ. ಹೀಗಾಗಿ ಈ ಶಾಲೆ ಕೆಲವೇ ವರ್ಷಗಳಲ್ಲಿ ರಾಜ್ಯಕ್ಕೆ ನಂ.1 ಶಾಲೆಯಾಗುವದರಲ್ಲಿ ಯಾವುದೇ ಸಂಶಯವಿಲ್ಲ ಎಂದು ವಿದ್ಯಾವತಿ ಗಡಗಿ ಹೇಳಿದರು.


Spread the love

LEAVE A REPLY

Please enter your comment!
Please enter your name here