ಲಕ್ನೋ: ಪ್ರಯಾಗ್ರಾಜ್ನಲ್ಲಿ ಇಂದು ಮಧ್ಯಾಹ್ನ ಭಾರತೀಯ ವಾಯುಪಡೆಯ ತರಬೇತಿ ವಿಮಾನ ಪತನಗೊಂಡಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ. ಜನವರಿ 21ರಂದು ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಸಂಭವಿಸಿದ ಈ ಘಟನೆ, ಸಂಗಮದ ಸಮೀಪದ ಪ್ರದೇಶದಲ್ಲಿ ನಡೆದಿದೆ.
ಸಂಗಮದಿಂದ ಸುಮಾರು 2 ಕಿಲೋಮೀಟರ್ ದೂರದಲ್ಲಿರುವ ಕೆರೆಯಲ್ಲಿ ಮೈಕ್ರೋಲೈಟ್ ತರಬೇತಿ ವಿಮಾನ ಪತನಗೊಂಡಿದೆ ಎಂದು ತಿಳಿದುಬಂದಿದೆ. ಅಪಘಾತದ ತಕ್ಷಣವೇ ರಕ್ಷಣಾ ಪಡೆಗಳು ಕಾರ್ಯಾಚರಣೆಗೆ ಧಾವಿಸಿದ್ದು, ವಿಮಾನದಲ್ಲಿದ್ದ ಇಬ್ಬರು ಪೈಲಟ್ಗಳನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ.
ಪೈಲಟ್ಗಳಿಗೆ ಸಣ್ಣಮಟ್ಟದ ಗಾಯಗಳಾಗಿದ್ದರೂ, ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಘಟನಾ ಸ್ಥಳದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ಅಪಘಾತದ ಕಾರಣ ಕುರಿತು ಮಾಹಿತಿ ಕಲೆಹಾಕಲಾಗುತ್ತಿದೆ.



