ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಮಗಳನ್ನ ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ!

0
Spread the love

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತ್ನಿ 5 ವರ್ಷದ ಮಗಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಪಾವಘಡದ ಗುಂಡಾರನಹಳ್ಳಿ ಗ್ರಾಮಪಂಚಾಯ್ತಿ ಅಧ್ಯಕ್ಷೆಯಾಗಿದ್ದ ಶೃತಿ (33) ಆತ್ಮಹತ್ಯೆ ಮಾಡಿಕೊಂಡ ಪತ್ನಿಯಾಗಿದ್ದು,

Advertisement

ಐದು ವರ್ಷದ ಮಗಳು ಮಗಳು ರೋಶಿಣಿಯನ್ನು ಫ್ಯಾನ್‌ಗೆ ನೇಣು ಹಾಕಿ ಬಳಿಕ ಅದೇ ಫ್ಯಾನಿಗೆ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಗಂಡ ಗೋಪಾಲಕೃಷ್ಣನ ಅಕ್ರಮ ಸಂಬಂಧಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಶೃತಿ ಡೆತ್ ನೋಟ್ ಬರೆದಿದ್ದಾರೆ.

ಬೆಂಗಳೂರಿನ ಬಗಲಗುಂಟೆಯಲ್ಲಿ ಭಾನುವಾರ ಸಂಜೆ ಘಟನೆ ನಡೆದಿದೆ. ಸ್ಥಳಕ್ಕೆ ಬಗಲಗುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ಮುಗಿಸಿ ಕುಟುಂಬಸ್ಥರಿಗೆ ಮೃತದೇಹಗಳನ್ನು ಪೊಲೀಸರು ಒಪ್ಪಿಸಿದ್ದಾರೆ. ಸದ್ಯ ಪತಿಯನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 


Spread the love

LEAVE A REPLY

Please enter your comment!
Please enter your name here