ಇಬ್ಬರು ಪುಟ್ಟ ಕಂದಮ್ಮಗಳನ್ನ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ತಾಯಿ!

0
Spread the love

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆ ಇಬ್ಬರು ಪುಟ್ಟ ಕಂದಮ್ಮಗಳನ್ನ ಕೊಂದು ಬಳಿಕ ತಾಯಿ ಸಹ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಕುಸುಮ (35 )ಆತ್ಮಹತ್ಯೆ ಗೆ ಶರಣಾದ ಮಹಿಳೆಯಾಗಿದ್ದು, ಶ್ರೀಯಾನ್ (6), ಚಾರ್ವಿ (1.5) ಸಾವನ್ನಪ್ಪಿದ ಮಕ್ಕಳಾಗಿದ್ದಾರೆ. ಕೊಡಿಗೇಹಳ್ಳಿಯ ಅಪಾರ್ಟ್ಮೆಂಟ್‌ವೊಂದರಲ್ಲಿ ದಂಪತಿ ಸುರೇಶ್ ಮತ್ತು ಕುಸುಮಾ ವಾಸವಾಗಿದ್ದರು.

ಕೌಟುಂಬಿಕ ಕಲಹದ ಹಿನ್ನೆಲೆ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ಬಳಿಕ ತಾಯಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನಾ ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ನಮ್ಮ ಸಾವಿಗೆ ನಾವೇ ಕಾರಣವೆಂದು ಬರೆದಿದ್ದಾಳೆ. ಸದ್ಯ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 


Spread the love

LEAVE A REPLY

Please enter your comment!
Please enter your name here