ಹಿಂದೂ ಯುವತಿ ಅಪಹರಿಸಿ ಮತ್ತು ಬರೋ ಪದಾರ್ಥ ನೀಡಿ ರೇಪ್ ಮಾಡಿದ ಮುಸ್ಲಿಂ ಯುವಕ!

0
Spread the love

ಉಡುಪಿ:- ಇನ್‌ಸ್ಟಾಗ್ರಾಂನಲ್ಲಿ ಸ್ನೇಹ ಬೆಳೆಸಿದ ಹಿಂದೂ ಯುವತಿಯನ್ನು ಕರೆದೊಯ್ದ ಮುಸ್ಲಿಂ ಯುವಕ, ಆಕೆಗೆ ಬಿಯರ್‌ನಲ್ಲಿ ಮತ್ತು ಬರಿಸುವ ಔಷಧ ಸೇರಿಸಿ ಕುಡಿಸಿ ಅತ್ಯಾಚಾರ ಎಸಗಿರುವ ಘಟನೆ ಜರುಗಿದೆ.

Advertisement

ಘಟನೆಯಲ್ಲಿ ಆತನ ಇಬ್ಬರು ಸ್ನೇಹಿತರು ಸಹಕರಿಸಿದ್ದು, ಸಾಮೂಹಿಕ ಅತ್ಯಾಚಾರ ನಡೆದಿದೆಯೇ ಎಂಬುದು ಇನ್ನೂ ದೃಢಪಡಬೇಕಿದೆ. ಈ ಪ್ರಕರಣದಲ್ಲಿ ಕಾರ್ಕಳ ನಗರದಲ್ಲಿ ಕೋಮು ಉದ್ವಿಗ್ನತೆಗೆ ಕಾರಣವಾಗಿದೆ.

ನಿನ್ನೆ ಸಂಜೆ ನಡೆದ ಪ್ರಕರಣ ರಾತ್ರಿಯ ಹೊತ್ತಿಗೆ ಉಲ್ಬಣಿಸಿದ್ದು, ಹಿಂದೂ ಸಂಘಟನೆಗಳ ಕಾರ್ಯಕರ್ತರು ಠಾಣೆಯ ಮುಂದೆ ಜಮಾವಣೆಗೊಂದು ಯುವಕನ ಮೇಲೆ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದರು. ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಈ ಕುರಿತು ಹೇಳಿಕೆ ನೀಡಿದ್ದಾರೆ.

ಕಾರ್ಕಳ ಠಾಣೆ ವ್ಯಾಪ್ತಿಯಲ್ಲಿ ಯುವತಿಯನ್ನು ಅಪಹರಿಸಿ ಅತ್ಯಾಚಾರ ದೂರು ಬಂದಿದೆ. ಸಂತ್ರಸ್ತೆಗೆ ಆರೋಪಿ ಜೊತೆಗೆ ಮೂರು ತಿಂಗಳಿಂದ ಪರಿಚಯವಿತ್ತು. ಇನ್ಸ್ಟಾಗ್ರಾಮ್ ಮೂಲಕ ಪರಸ್ಪರ ಪರಿಚಯ ಹೊಂದಿದ್ದರು.

ಶುಕ್ರವಾರ ಆರೋಪಿ ಅಲ್ತಾಫ್ ಕರೆ ಮಾಡಿ ಸಂತ್ರಸ್ತೆಗೆ ಬರಲು ಹೇಳಿದ್ದ. ಆಕೆ ಬಂದಾಗ ಅಲ್ಲಿಂದ ಅಪಹರಿಸಿದ್ದ. ಬಿಯರ್‌ನಲ್ಲಿ ಏನನ್ನೊ ಬೆರೆಸಿ ಕುಡಿಸಿ ಮತ್ತು ಬರಿಸಿ ಅತ್ಯಾಚಾರ ಮಾಡಿದ್ದಾಗಿ ಸಂತ್ರಸ್ತೆ ತಿಳಿಸಿದ್ದಾಳೆ. ಆರೋಪಿ ಅಲ್ತಾಫ್‌ನನ್ನು ಬಂಧಿಸಲಾಗಿದೆ” ಎಂದು ಅರುಣ್‌ ಕುಮಾರ್‌ ಹೇಳಿದ್ದಾರೆ.

ಆರೋಪಿಗೆ ಬಿಯರ್ ಬಾಟಲ್ ತಂದುಕೊಟ್ಟಿದ್ದ ಇಬ್ಬರು ಆರೋಪಿಗಳ ಪೈಕಿ ಸುಬೇರ್ ಎಂಬಾತನನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ ವಾಹನವನ್ನು ಸೀಜ್ ಮಾಡಲಾಗಿದೆ. ಸಂತ್ರಸ್ತೆಗೆ ಮಣಿಪಾಲ ಕೆಎಂಸಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಸ್‌ಪಿ ತಿಳಿಸಿದ್ದಾರೆ. ಯುವತಿ ಜೇನು ಕೃಷಿ ಇಲಾಖೆಯಲ್ಲಿ ಕೆಲಸಕ್ಕಿದ್ದಳು. ಇನ್‌ಸ್ಟಾಗ್ರಾಂನಲ್ಲಿ ಇವರಿಗೆ ಸ್ನೇಹ ಬೆಳೆದಿತ್ತು ಎಂದು ತಿಳಿದುಬಂದಿದೆ.

ಆರೋಪಿ ಅಲ್ತಾಫ್ ವಿರುದ್ಧ ಹಿಂದೂ ಯುವತಿಯ ತಾಯಿಯಿಂದ ರೇಪ್ & ಕಿಡ್ನಾಪ್ ಪ್ರಕರಣ ದಾಖಲಾಗಿದೆ. ಪ್ರಮುಖ ಆರೋಪಿ ಅಲ್ತಾಫ್ ಮತ್ತು ಸಹಕರಿಸಿದ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿಗೆ ಬಲೆ ಬೀಸಲಾಗಿದೆ.


Spread the love

LEAVE A REPLY

Please enter your comment!
Please enter your name here