Pahalgam Attack| ವಾರದ ಹಿಂದಷ್ಟೇ ಹೊಸ ಬಾಳಿಗೆ ಕಾಲಿಟ್ಟಿದ್ದ ನೌಕಾಪಡೆ ಅಧಿಕಾರಿ ಉಗ್ರರ ದಾಳಿಗೆ ಬಲಿ!

0
Spread the love

ಶ್ರೀನಗರ:- ದಕ್ಷಿಣ ಕಾಶ್ಮೀರದ ಪ್ರವಾಸಿ ತಾಣ ಪಹಲ್ಗಾಮ್ ಕಣಿವೆಯಲ್ಲಿ ನಡೆದ ಉಗ್ರರ ದಾಳಿಗೆ ವಾರದ ಹಿಂದೆಯಷ್ಟೇ ಮದ್ವೆಯಾಗಿದ್ದ ನೌಕಾಪಡೆ ಅಧಿಕಾರಿ ಬಲಿಯಾಗಿದ್ದಾರೆ.

Advertisement

ಹರಿಯಾಣ ಮೂಲದ 26 ವರ್ಷದ ಲೆಫ್ಟಿನೆಂಟ್ ವಿನಯ್ ನರ್ವಾಲ್ ದಾಳಿಯಲ್ಲಿ ಮೃತಪಟ್ಟ ಅಧಿಕಾರಿ. ನರ್ವಾಲ್‌ ಇದೇ ಏಪ್ರಿಲ್‌ 16ರಂದು ಮದುವೆಯಾಗಿದ್ದರು. ಕೊಚ್ಚಿಯಲ್ಲಿ ಹೊಸದಾಗಿ ನೇಮಕಗೊಂಡಿದ್ದ ನೌಕಾಪಡೆಯ ನರ್ವಾಲ್‌ ರಜೆಯ ಮೇಲೆ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸದಲ್ಲಿರುವಾಗಲೇ ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ.

ಇನ್ನೂ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಬಾಲಬಿಚ್ಚಿದ್ದು, ಹಿಂದೂಗಳ ನರಮೇಧವಾಗಿದೆ. ದಕ್ಷಿಣ ಕಾಶ್ಮೀರದ ಪ್ರವಾಸಿ ತಾಣ ಪಹಲ್ಗಾಮ್ ಕಣಿವೆಯಲ್ಲಿ ಪ್ರವಾಸಿಗರನ್ನೇ ಟಾರ್ಗೆಟ್ ಮಾಡಿ 30ಕ್ಕೂ ಪ್ರವಾಸಿಗರನ್ನು ಕೊಂದು ರಕ್ತದ ಕೋಡಿ ಹರಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here