ಬಹುಮಹಡಿ ಕಟ್ಟಡದಿಂದ ಬಿದ್ದು ನರ್ಸಿಂಗ್ ವಿದ್ಯಾರ್ಥಿನಿ ಸಾವು!

0
Spread the love

ಬೆಂಗಳೂರು: ಬಹುಮಹಡಿ ಕಟ್ಟಡದಿಂದ ಬಿದ್ದು ನರ್ಸಿಂಗ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದ ಸೋಲದೇವಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ. ಅತುಲ್ಯ ಮೃತಪಟ್ಟ ನರ್ಸಿಂಗ್ ವಿದ್ಯಾರ್ಥಿನಿಯಾಗಿದ್ದು, ಧನ್ವಂತರಿ ಕಾಲೇಜಿನಲ್ಲಿ ಯುವತಿ ನರ್ಸಿಂಗ್ ಓದುತ್ತಿದ್ದಳು. ಕಳೆದ ಒಂದೂವರೆ ತಿಂಗಳ ಹಿಂದಷ್ಟೇ ನರ್ಸಿಂಗ್ ಕೋರ್ಸ್‌ಗೆ ಸೇರಿಕೊಂಡಿದ್ದಳು.

Advertisement

ಆರನೇ ಮಹಡಿಯಲ್ಲಿ ಇರುವಾಗ ಯುವತಿ ಕಾಲು ಜಾರಿ ಕೆಳಗಡೆ ಬಿದ್ದು ಮೃತಪಟ್ಟಿದ್ದಾಳೆ. ಭಾನುವಾರ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಸೋಲದೇವಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 


Spread the love

LEAVE A REPLY

Please enter your comment!
Please enter your name here