ಹಾಸನ:– ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಿ ಜಾತ್ರಾ ಮಹೋತ್ಸವ ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿದೆ.
Advertisement
ಪುರಾಣ ಪ್ರಸಿದ್ದ ಹಾಸನಾಂಬ ದೇವಿ ಜಾತ್ರಾ ಮಹೋತ್ಸವವು ಇಂದಿನಿಂದ ಅಕ್ಟೊಬರ್ 23 ರವರೆಗೆ ನಡೆಯಲಿದೆ. ಅದರಂತೆ ಅರಸು ವಂಶಸ್ಥರು ಬನ್ನಿ ಕಡಿದ ನಂತರ ಇಂದು ಮಧ್ಯಾಹ್ನ 12 ಗಂಟೆ ನಂತರ ಹಾಸನಾಂಬೆಯ ಗರ್ಭಗುಡಿ ಬಾಗಿಲು ತೆರೆಯಲಿದೆ.
ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ತುಮಕೂರು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ, ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್, ಸಂಸದ ಶ್ರೇಯಸ್ ಪಟೇಲ್ ಸಮ್ಮುಖದಲ್ಲಿ ಗರ್ಭಗುಡಿಯ ಬಾಗಿಲನ್ನು ತೆರೆಯಲಾಗುವುದು. ಕಳೆದ ವರ್ಷ ಕಳೆದ ನ.3 ರಂದು ಮುಚ್ಚಿದ್ದ ಗರ್ಭಗುಡಿ ಬಾಗಿಲು ಇಂದು ತೆರೆಯಲಿದೆ. ಈ ಬಾರಿ 25 ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸುವ ನಿರೀಕ್ಷೆಯಿದೆ.