ವಿಜಯಪುರ:ಎಪಿಎಂಸಿ ಹೊರಗೆ ಯುವಕನ ಶವ ಪತ್ತೆ ಆಗಿರುವ ಘಟನೆ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದಲ್ಲಿ ಜರುಗಿದೆ. ಅನೈತಿಕ ಸಂಬಂಧ ಹೊಂದಿದ್ದರಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
Advertisement
23 ವರ್ಷದ ಸುನೀಲ ಭಜಂತ್ರಿ ಮೃತ ಯುವಕ. ಭಾನುವಾರ ಯುವಕ ಹಾಗೂ ಇತರರು ಸೇರಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ಬಳಿಕ ಯುವಕನ ಕುತ್ತಿಗೆಗೆ ಹಗ್ಗ ಹಾಕಿ ಕುತ್ತಿಗೆಯನ್ನು ತುಳಿದು ಕೊಲೆ ಮಾಡಿದ್ದಾರೆ. ಕೊಲೆಗೂ ಮುನ್ನ ಎಣ್ಣೆ ಪಾರ್ಟಿ ಮಾಡುವಾಗ, ಸಾಯುವ ಮೊದಲು ವಿಡಿಯೋ ಮಾಡಿದ್ದಾರೆ. ಜೊತೆಗೆ ಸತ್ತ ಬಳಿಕ ವಿಡಿಯೋ ಮಾಡಿದ್ದು, ವೈರಲ್ ಆಗಿದೆ.
ಅನೈತಿಕ ಸಂಬಂಧ ಹೊಂದಿದ್ದರಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ವಿಡಿಯೋ ಆಧಾರದ ಮೇಲೆ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ.