ಕಲಬುರಗಿ:- ಕೈದಿಗಳಿಂದಲೇ ಕಲಬುರಗಿ ಸೆಂಟ್ರಲ್ ಜೈಲ್ ಅಧೀಕ್ಷಕಿಯ ಕೊಲೆಗೆ ಸಂಚು ರೂಪಿಸಿದ ಶಂಕೆ ಹಿನ್ನೆಲೆ, ಒಂಭತ್ತು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಕೇಂದ್ರ ಕಾರಾಗೃಹದ ಅಧೀಕ್ಷಕಿ ಅನಿತಾ ಅವರ ಕಾರನ್ನು ಸ್ಫೋಟಿಸುವುದಾಗಿ ಬೇದರಿಕೆ ಹಾಕಿದ್ದ ಪ್ರಕರಣಕ್ಕೆ ಮುಸ್ತಫಾ,ನಸೀರ್, ಬಚ್ಚನ್,ಅಲ್ತಾಫ್, ದೇವರಾಜ್, ನಾಗರಾಜ್, ಶ್ರೀಕಾಂತ್ ಸೇರಿ 9 ಕೈದಿಗಳ ವಿರುದ್ಧ FIR ದಾಖಲಾಗಿದೆ.
ಜೈಲಿನಲ್ಲಿ ಬೀಡಿ, ಗುಟ್ಕಾ ಸಿಗರೇಟ್ ಬಂದ್ ಮಾಡಿದ್ದಕ್ಕೆ ಅನೀತಾ ವಿರುದ್ಧ ಕೈದಿಗಳು ಪ್ರತಿಭಟನೆ ನಡೆಸಿದ್ದರು. ಆ ಬಳಿಕ ದುಷ್ಕರ್ಮಿಯೊಬ್ಬನಿಂದ ಆಡಿಯೋ ರೂಪದಲ್ಲಿ ಬೆದರಿಕೆ ಸಂದೇಶ ಬಂದಿತ್ತು. ಇದನ್ನ ಜೈಲಿನಲ್ಲಿರುವ ಕೈದಿಗಳೇ ಕಳುಹಿಸಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿತ್ತು. ಇದೀಗ ಈ ಪ್ರಕರಣದ ಹಿಂದೆ 9 ಜನ ಕೈದಿಗಳ ಕೈವಾಡ ಇರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ.
ಮತ್ತೊಂದೆಡೆ ಅನಿತಾ ಅವರ ಬ್ಲ್ಯಾಕ್‌ಮೇಲ್ ಪ್ರಕರಣದ ಹಿಂದೆ ಜೈಲಾಧಿಕಾರಿಗಳೇ ಇದ್ದಾರೆ ಅನ್ನೋ ಆರೋಪವೂ ಕೇಳಿಬಂದಿದೆ. ಜೈಲಿನಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಿದ ಹಿನ್ನೆಲೆ ಅನಿತಾ ಅವರ ವಿರುದ್ಧ ಪಿತೂರಿ ನಡೆಸಲಾಗಿದೆ ಅನ್ನೋ ಆರೋಪ ಕೇಳಿಬಂದಿದೆ.