ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅತ್ಯಾಚಾರ ಪ್ರಕರಣ ಬೆಳಕಿದೆ ಬಂದಿದೆ. ಹೌದು ಖಾಸಗಿ ಕಂಪೆನಿಯೊಂದರ ಯುವತಿಯೊಬ್ಬಳು ಪ್ರಜ್ಞೆ ತಪ್ಪಿಸಿ ತನ್ನ ಮೇಲೆ ಗ್ಯಾಂಗ್ ರೇಪ್ ನಡೆದಿದೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಕಳೆದ ಡಿ.12ರ ರಾತ್ರಿ ಸಂತ್ರಸ್ತೆ ಕೋರಮಂಗಲದ ಪಬ್ವೊಂದಕ್ಕೆ ಹೋಗಿದ್ದಾಳೆ. ಬಳಿಕ ಏನು ಆಯಿತೋ ಏನೋ ಆಕೆಗೆ ಪ್ರಜ್ಞೆ ಬಂದಾಗ ಆಡುಗೋಡಿಯ ದೇವೇಗೌಡ ಲೇಔಟ್ ಬಳಿ ಇದ್ದುದ್ದಾಗಿ ಹೇಳಿದ್ದಾಳೆ.
Advertisement
ತಾನು ಅಲ್ಲಿಗೆ ಹೇಗೆ ಬಂದೆ ಎಂಬುದೇ ತಿಳಿದಿಲ್ಲ ಎಂದಿದ್ದಾಳೆ. ಕೂಡಲೇ ಸ್ಥಳೀಯರ ನೆರವಿನೊಂದಿಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ವೇಳೆ ತನ್ನ ದೇಹದ ಮೇಲೆ ತರಚು ಗಾಯಗಳಾಗಿದ್ದು, ಗ್ಯಾಂಗ್ ರೇಪ್ ಆಗಿದೆ ಎಂಬ ಶಂಕೆ ಇದೆ ಎಂದು ದೂರು ನೀಡಿದ್ದಾಳೆ. ಯುವತಿಯೊಬ್ಬಳ ಮೇಲೆ ಗ್ಯಾಂಗ್ ರೇಪ್ ನಡೆದಿದೆ ಎಂಬ ಆರೋಪ ಹಿನ್ನೆಲೆ ದೂರು ದಾಖಲಿಸಿಕೊಂಡಿರುವ ಕೋರಮಂಗಲ ಠಾಣೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.