ಹೊಟ್ಟೆನೋವು ಎಂದು ನಿದ್ರೆ ಮಾತ್ರೆ ಸೇವಿಸಿ ಖಾಸಗಿ ಆಸ್ಪತ್ರೆ ನರ್ಸ್ ಆತ್ಮಹತ್ಯೆ..!

0
Spread the love

ಚಿತ್ರದುರ್ಗ: ಚಿತ್ರದುರ್ಗದ ಚಳ್ಳಕೆರೆ ತಾಲೂಕು ಕೋಡಿಹಳ್ಳಿಯಲ್ಲಿ ನಿದ್ರೆ ಮಾತ್ರೆ ಸೇವಿಸಿ ಖಾಸಗಿ ಆಸ್ಪತ್ರೆ ನರ್ಸ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಿರ್ಮಲ(26) ಆತ್ಮಹತ್ಯೆಗೆ ಶರಣಾದ ಯುವತಿಯಾಗಿದ್ದು, ಸಿಲಿಕಾನ್‌ ಸಿಟಿ ಬೆಂಗಳೂರಿನ RR ನಗರ ಖಾಸಗಿ ಆಸ್ಪತ್ರೆಯಲ್ಲಿ ನಿರ್ಮಲ ಸೇವೆ ಸಲ್ಲಿಸುತ್ತಿದ್ದರು.

Advertisement

ಹೊಟ್ಟೆನೋವು ಹಿನ್ನೆಲೆ‌ ನರ್ಸ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ನಿರ್ಮಲರನ್ನು ದಾವಣಗೆರೆ ಚಿಗಟೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ನಿರ್ಮಲ ಸಾವನ್ನಪ್ಪಿದ್ದಾರೆ. ಈ ಘಟನೆ ಸಂಬಂಧ ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here