ಬೆಳಗಾವಿ: ಮಹಾರಾಷ್ಟ್ರದ ಸಾಂಗಲಿ ಮೂಲದ ವಿದ್ಯಾರ್ಥಿ ಬೆಳಗಾವಿ ಜಿಲ್ಲೆಯ ನಿಡಸೋಸಿಯ ಪಿಯು ಕಾಲೇಜಿನ ಹಾಸ್ಟೆಲ್‌ನಲ್ಲಿ ನೇಣುಬಿಗಿದುಕೊಮಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಯೂರ ಕುಂಬಾರ(17) ಸಾವಿಗೆ ಕೊರಳೊಡ್ಡಿದ ಯುವಕನಾಗಿದ್ದು,
ಈತ ಮಹಾರಾಷ್ಟ್ರದ ಸಾಂಗಲಿ ಮೂಲದ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಪ್ರಥಮ ಪಿಯುಸಿ ಸೈನ್ಸ್ ವಿಭಾಗದಲ್ಲಿ ಈತ ವ್ಯಾಸಂಗ ಮಾಡುತ್ತಿದ್ದ. ಸಂಜೆ ರೂಮ್ ನಲ್ಲಿ ಯಾರು ಇಲ್ಲದಾಗ ಬೆಡ್ ಶೀಟ್ ನಿಂದ ಪ್ಯಾನ್ ಗೆ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾನೆ.
ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿ ಪೋಷಕರು ಮಹಾರಾಷ್ಟ್ರದಿಂದ ಸ್ಥಳಕ್ಕೆ ಬಂದ ಬಳಿಕ ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ರವಾನೆ ಮಾಡಲಾಗುವುದು. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನಿಡಸೋಸಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.



