ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ ಪರಿತಪಿಸುವಂತಾಗಿದ್ದು, ಕೇಂದ್ರ ಸರಕಾರದ ಬೆಂಬಲ ಬೆಲೆ ಯೋಜನೆಗಳು ತಡವಾಗಿ ಪ್ರಾರಂಭವಾಗಿ ರೈತರಿಗೆ ಅನಾನುಕೂಲವಾಗಿದೆ. ಈ ಹಿನ್ನೆಲೆಯಲ್ಲಿ ರೈತರಿಗೆ ಅನೂಕೂಲವಾಗುವ ನಿಟ್ಟಿನಲ್ಲಿ ಹೆಸರು ಬೆಳೆಯ ಬೆಂಬಲ ಬೆಲೆ ಖರೀದಿ ಕೇಂದ್ರವನ್ನು ಕೂಡಲೇ ಪ್ರಾರಂಭಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಹಸೀಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗದಗ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಸವರಾಜ ಹೊಗೆಸೊಪ್ಪಿನ, ರೈತರು ಸಂಕಷ್ಟದಲ್ಲಿದ್ದು, ಧಾರಣೆ ಕುಸಿತದಿಂದ ಬಿತ್ತನೆಗೆ ಖರ್ಚು ಮಾಡಿದ ಹಣವೂ ರೈತರ ಕೈಸ್ಭೆರದಂತಾಗಿದೆ. ಕೂಡಲೇ ಬೆಂಬಲ ಬೆಲೆ ಖರೀದಿ ಕೇಂದ್ರವನ್ನು ಪ್ರಾರಂಭಿಸಿ ರೈತರಿಗೆ ಅನೂಕೂಲ ಮಾಡಿಕೊಡಬೇಕೆಂದು ವಿನಂತಿಸಿದರು.
ಗ್ರೇಡ್-2 ತಹಸೀಲ್ದಾರ ಮಂಜುನಾಥ ಅಮಾಸಿ ಮನವಿ ಸ್ವೀಕರಿಸಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳುವದಾಗಿ ಹೇಳಿದರು. ಈ ಸಂದರ್ಭದಲ್ಲಿ ರೈತ ಘಟಕದ ಅಧ್ಯಕ್ಷ ಸಿ.ಎಫ್. ಗಡ್ಡದೇವರಮಠ, ತಾಲೂಕಾಧ್ಯಕ್ಷ ಲೋಕೇಶ ಸುತಾರ, ಪ್ರಧಾನ ಕಾರ್ಯದರ್ಶಿ ಪ್ರಕಾಶ ಕೊಂಚಿಗೇರಿಮಠ, ಜಿಲ್ಲಾ ಉಪಾಧ್ಯಕ್ಷ ಶಂಕರಗೌಡ ಪಾಟೀಲ, ನಗರ ಘಟಕದ ಅಧ್ಯಕ್ಷ ಪ್ರವೀಣ ಗೌರಿ, ಕುಮಾರ ನರೆಗಲ್, ಪ್ರವೀಣ, ದುದ್ನೇಪ್ಪ ಸೊಪ್ಪಿನ, ರಮೇಶ ಪೂಜಾರ, ಸಾವಿತ್ರಿ, ಸಾವಕ್ಕ ಮಳ್ಳಳ್ಳಿ, ಲಕ್ಷö್ಮವ್ವ ಮಳ್ಳಳ್ಳಿ, ಪ್ರಭಾವತಿ ಸೇರಿದಂತೆ ನೂರಾರು ಕಾರ್ಯಕರ್ತರು ಹಾಜರಿದ್ದರು.