ವಿಜಯಸಾಕ್ಷಿ ಸುದ್ದಿ, ಗದಗ : ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಮುಖ್ಯವೇ ಹೊರತು ಸೋಲು-ಗೆಲುವು ಅಲ್ಲ. ಸೋಲು-ಗೆಲುವು ಎರಡನ್ನೂ ಸಮನಾಗಿ ಸ್ವೀಕರಿಸಿ ಎಂದು ಕರ್ನಾಟಕ ರಾಜ್ಯ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ, ಜಿಲ್ಲಾ ಅಧ್ಯಕ್ಷರಾದ ರವಿ ಎಲ್.ಗುಂಜಿಕರ ಹೇಳಿದರು.
ಅವರು ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯತ ಗದಗ, ತಾಲೂಪಂಚಾಯತ ಗದಗ, ಶಾಲಾ ಶಿಕ್ಷಣ ಇಲಾಖೆ ಗದಗ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಗ್ರಾಮೀಣ ವಲಯ ಗದಗ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 2024-25ನೇ ಸಾಲಿನ ಗದಗ ಗ್ರಾಮೀಣ ವಲಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ತಾಲೂಕು ಮಟ್ಟದ ಕ್ರೀಡಾಕೂಟದ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚು ಮಹತ್ವ ನೀಡಬೇಕಾಗಿದೆ. ಗ್ರಾಮೀಣ ಭಾಗದ ಯುವಕರಲ್ಲಿರುವ ಪ್ರತಿಭೆಯನ್ನು ಗುರುತಿಸಿ ನಿರ್ಣಾಯಕರು ಪ್ರೋತ್ಸಾಹ ನೀಡಬೇಕು. ಉದ್ಯೋಗಗಳಲ್ಲಿ ಕ್ರೀಡಾ ಮೀಸಲಾತಿ ನೀಡಲಾಗುತ್ತದೆ. ಅದನ್ನು ಕ್ರೀಡಾಪಟುಗಳು ಸದುಪಯೋಗ ಪಡಿಸಿಕೊಳ್ಳಲು ಮನವಿ ಮಾಡಿದರು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗದಗ ಜಿಲ್ಲಾ ಅಧ್ಯಕ್ಷ ವ್ಹಿ.ಎಂ. ಹಿರೇಮಠ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ಗದಗ ಜಿಲ್ಲೆಯಲ್ಲಿ ಎಲ್ಲಾ ಕ್ರೀಡೆಗಳನ್ನು ಆಯೋಜಿಸಲು ಸಕಲ ಸೌಲಭ್ಯಗಳನ್ನು ಹೊಂದಿದೆ. ಇದನ್ನು ಬಳಸಿಕೊಂಡು ನಿರಂತರ ಅಭ್ಯಾಸ ಮಾಡಿ ರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ಕ್ರೀಡೆಗಳಲ್ಲಿ ಭಾಗವಹಿಸಿ ಜಯಶಾಲಿಗಳಾದ ಮಾತ್ರ ನಿಮ್ಮ ಬದುಕನ್ನು ರೂಪಿಸಿಕೊಳ್ಳಲು ಸಾಧ್ಯ ಎಂದರು.
ಗದಗ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ವ್ಹಿ.ವ್ಹಿ. ನಡುವಿನಮನಿ, ಗದಗ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರಡಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಶಂಕರ ಹಡಗಲಿ, ಗದಗ ಗ್ರಾಮೀಣ ಕ್ಷೇತ್ರ ಸಮನ್ವಯಾಧಿಕಾರಿ ಜೆ.ಎ. ಬಾವಿಕಟ್ಟಿ, ನಿವೃತ್ತ ಶಿಕ್ಷಕ ಎಸ್.ಎನ್. ಬಳ್ಳಾರಿ, ಬಿ.ಕೆ. ಕೊಣ್ಣೂರ, ಗದಗ ಕ್ರೀಡಾ ಇಲಾಖೆಯ ಸಹಾಯ ನಿರ್ದೇಶಕ ಶರಣು ಗೊಗೇರಿ, ವಾಸು ಕಲಕಂಬಿ, ರವಿರಾಜ ಪವಾರ, ಎಸ್.ಆರ್. ಬಂಡಿ, ರಾಜು ಚವ್ಹಾಣ, ಎಂ.ಆರ್. ಪೂಜಾರ, ಡಿ.ಎಸ್. ತಳವಾರ, ಎಫ್.ಎಂ. ಮುಶಣ್ಣವರ, ಜೆ.ಬಿ. ಅಣ್ಣಿಗೇರಿ ಮುಂತಾದವರು ಉಪಸ್ಥಿತರಿದ್ದರು.
ಗದಗ ಗ್ರಾಮೀಣ ದೈಹಿಕ ಶಿಕ್ಷಣ ಅಧಿಕಾರಿ ಟಿ.ಎಸ್. ಪವಾರ ಸ್ವಾಗತಿಸಿದರು. ಗದಗ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ವ್ಹಿ.ವ್ಹಿ. ನಡುವಿನಮನಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಾರದಾ ಬಂಡಿ ಪ್ರಾರ್ಥನೆ ಸಲ್ಲಿಸಿದರು. ಎನ್.ವೈ. ಸಂಗೊಂದಿ ಪ್ರತಿಜ್ಞಾ ವಿಧಿ ಬೋಧಿಸಿದರು. ಎಮ್.ಆರ್. ಪಾಟೀಲ ವಂದಿಸಿದರು. ಈ ಸಂದರ್ಭದಲ್ಲಿ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರನ್ನ ಹಾಗೂ ಎಂಟು ವಲಯಗಳ ಕ್ರೀಡಾಕೂಟ ಆಯೋಜಕರನ್ನ ಸನ್ಮಾನಿಸಲಾಯಿತು. ವಿವಿಧ ಗ್ರಾಮಗಳಿಂದ ಆಗಮಿಸಿದ ಮಕ್ಕಳು ಕ್ರೀಡಾ ಕೂಟದಲ್ಲಿ ಭಾಗವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಕ್ರೀಡಾ ಜ್ಯೋತಿ ಸ್ವೀಕರಿಸಿದ ಕರ್ನಾಟಕ ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ ಗದಗ ಜಿಲ್ಲಾಧ್ಯಕ್ಷ ಬಿ.ಎಫ್. ಪೂಜಾರ ಮಾತನಾಡಿ, ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಸಹಕಾರಿಯಾಗಲಿದೆ. ಕ್ರೀಡೆಗಳಲ್ಲಿ ಭಾಗವಹಿಸುವದರಿಂದ ಆರೋಗ್ಯದ ಜೊತೆಗೆ ದೇಹ ಮತ್ತು ಮನಸ್ಸು ಸದೃಢವಾಗಿ ಶಿಕ್ಷಣದಲ್ಲಿ ಉತ್ತಮ ಸಾಧನೆ ಮಾಡಬಹುದು. ಕ್ರೀಡೆಗಳಲ್ಲಿ ಕೌಶಲ್ಯವನ್ನು ಬಳಸಿಕೊಂಡು ಉತ್ತಮ ಕ್ರೀಡಾಪಟುಗಳಾಗಿ ರಾಜ್ಯ ಮತ್ತು ರಾಷ್ಟçಮಟ್ಟದಲ್ಲಿ ಜಯಗಳಿಸಿ ಗದಗ ಜಿಲ್ಲೆಯ ಕೀರ್ತಿ ಬೆಳಗಬೇಕೆಂದರು.