ಮಾತೆಯ ಹೆಸರಲ್ಲಿ ಒಂದು ಸಸಿ ನೆಡುವ ಕಾರ್ಯಕ್ರಮ

0
A sapling program in the name of Mother
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಅವರು ಗುರುವಾರ ತಮ್ಮ ಸರ್ಕಾರಿ ನಿವಾಸದ ಆವರಣದಲ್ಲಿ ಸಾಮಾಜಿಕ ಅರಣ್ಯ ಇಲಾಖೆಯ ಸಹಕಾರದಿಂದ ಮಾತೆಯ ಹೆಸರಲ್ಲಿ ಒಂದು ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Advertisement

ಜಿಲ್ಲೆಯಲ್ಲಿ ಪ್ರತಿ ಪ್ರಜೆಯೂ ಮಾತೆಯ ಹೆಸರಲ್ಲಿ ಒಂದು ಸಸಿ ನೆಡುವ ಮೂಲಕ ಪ್ರಕೃತಿಯನ್ನು ಉಳಿಸುವಂತೆ ಅವರು ಕರೆ ನೀಡಿದರು. ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಮಂತ್ರಿಯವರು ತಾಯಿಯ ಹೆಸರಲ್ಲಿ ಒಂದು ವೃಕ್ಷ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಅದರಂತೆ ರಾಷ್ಟç ಮಟ್ಟದಲ್ಲಿ ನರೇಗಾ ಯೋಜನೆಯಡಿ ಅರಣ್ಯ ಇಲಾಖೆಯ ಒಗ್ಗೂಡುವಿಕೆಯೊಂದಿಗೆ ಸದರಿ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಭರತ್ ಎಸ್ ತಿಳಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಸಾಮಾಜಿಕ ಅರಣ್ಯ ಇಲಾಖೆಯಡಿ 2024-25ನೇ ಸಾಲಿನ ಗುರಿಗನುಗುಣವಾಗಿ ಅನುಷ್ಠಾನಿಸಬೇಕಿರುವ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಚಂದ್ರಹಾಸ ವರ್ಣೇಕರ್, ಜಿಲ್ಲಾ, ತಾಲೂಕು ಮತ್ತು ಗ್ರಾ.ಪಂ, ಅರಣ್ಯ, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು, ಗಣ್ಯರು, ಸಿಬ್ಬಂದಿಗಳು ಹಾಜರಿದ್ದರು.

ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನಿಡಗುಂದಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ, ನರಗುಂದ ತಾಲೂಕಿನ ಚಿಕ್ಕನರಗುಂದ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ, ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ, ಲಕ್ಕುಂಡಿಯ ಸರ್ಕಾರಿ ಹಿರಿಯ ಪ್ರೌಢಶಾಲೆ ಆವರಣದಲ್ಲಿ ಹಾಗೂ ಮುಂಡರಗಿ ತಾಲೂಕಿನ ಕದಾಂಪೂರದ ಕಪ್ಪತ್ತಗಿರಿ ಗ್ರಾಮ, ಪೇಠಾಲೂರು ಗ್ರಾಮಗಳಲ್ಲಿಯೂ ತಾಯಿಯ ಹೆಸರಲ್ಲಿ ಒಂದು ವೃಕ್ಷ ಅಭಿಯಾನಕ್ಕೆ ಚಾಲನೆ ನೀಡಲಾಯಿತು.


Spread the love

LEAVE A REPLY

Please enter your comment!
Please enter your name here