ಕೊಡಗು:- ಹಾಡಹಗಲೇ ಚಿನ್ನಾಭರಣ ದೋಚಿ ಎಸ್ಕೇಪ್ ಆಗುತ್ತಿದ್ದ ಆರೋಪಿಯನ್ನು ಕ್ಷಣಾರ್ಧದಲ್ಲಿ ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿರುವ ಘಟನೆ ಮಡಿಕೇರಿ ತಾಲೂಕಿನ ಕೊಂಡಂಗೇರಿಯಲ್ಲಿ ಜರುಗಿದೆ.
Advertisement
  
ಕುಡಿಯಲು ನೀರು ಕೇಳುವ ನೆಪದಲ್ಲಿ ಬಂದ ಪಾಲಿಬೆಟ್ಟದ ಮುನ್ನಾವರ್ ಎಂಬ ಆರೋಪಿಯು, ಅತ್ತೆ ಸಾರಾಮ್ಮ, ಸೊಸೆ ಸಫಾನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಚಿನ್ನದ ಸರ ದೋಚಿ ಎಸ್ಕೇಪ್ ಆಗುತ್ತಿದ್ದ. ಈ ವೇಳೆ ಅತ್ತೆ-ಸೊಸೆ ಚೀರಾಟ ಕೇಳಿ ಅಲರ್ಟ್ ಆದ ಸ್ಥಳೀಯರು, ಕೆಲವೇ ಕ್ಷಣಗಳಲ್ಲಿ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಘಟನೆಯಲ್ಲಿ ಅತ್ತೆ-ಸೊಸೆಯ ಕುತ್ತಿಗೆ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಮಡಿಕೇರಿ ಆಸ್ಪತ್ರೆಯಲ್ಲಿ ಇಬ್ಬರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.


