Belagavi: ಟ್ರ್ಯಾಕ್ಟರ್ ಹರಿಸಿ ಒಡಹುಟ್ಟಿದ ತಮ್ಮನನ್ನೇ ಭೀಕರವಾಗಿ ಕೊಲೆಗೈದ ಪಾಪಿ ಅಣ್ಣ!

0
Spread the love

ಬೆಳಗಾವಿ: ಪಾಪಿ ಅಣ್ಣನೊಬ್ಬ ಟ್ರ್ಯಾಕ್ಟರ್ ಹರಿಸಿ ಒಡಹುಟ್ಟಿದ ತಮ್ಮನನ್ನೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣ ಹೊರವಲಯದ‌ ಜಮೀನಿನಲ್ಲಿ ನಡೆದಿದೆ. ಯರಗಟ್ಟಿಯ ಗೋಪಾಲ ಬಾವಿಹಾಳ( 27) ಹತ್ಯೆಯಾದ ದುರ್ದೈವಿಯಾಗಿದ್ದು, ಮಾರುತಿ ಬಾವಿಹಾಳ (30) ತಮ್ಮನನ್ನೇ ಹತ್ಯೆ ಮಾಡಿದ ಪಾಪಿ ಅಣ್ಣನಾಗಿದ್ದಾನೆ. ನಿತ್ಯ ಮದ್ಯ ಸೇವಿಸಿ ಬಂದು ಪಿತ್ರಾರ್ಜಿತ ಆಸ್ತಿ ಅನುಭವಿಸಲು ನಿಮಗೆ ಬಿಡಲ್ಲ‌ ಎಂದು ಗೋಪಾಲ ಕಿರಿಕಿರಿ ಮಾಡುತ್ತಿದ್ದನಂತೆ.

Advertisement

ಗೋಪಾಲನ ತಂದೆ ಅರ್ಜುನ್‌ ಬಾವಿಹಾಳ ಅವರಿಗೆ ಮೂವರು ಗಂಡು ಮಕ್ಕಳು. ಕಳೆದ 15 ದಿನಗಳ ಹಿಂದಷ್ಟೇ ತಮಗೆ ಬಂದ ಜಮೀನು ಪಾಲು, ಹಣ ಪಡೆದು ಸಹೋದರರು ಬೇರೆ ಬೇರೆಯಾಗಿದ್ದರು. ಮೂವರೂ ಸಹೋದರರಿಗೂ ಒಂದೊಂದು ಟ್ರ್ಯಾಕ್ಟರ್ ಪಾಲಿಗೆ ಬಂದಿದ್ದವು. ಮೃತ ಗೋಪಾಲನಿಗೆ ಬಂದಿದ್ದ ಟ್ರ್ಯಾಕ್ಟರ್ ಅನ್ನು ಹೆಂಡತಿ ಮನೆಯಲ್ಲಿ ಇಟ್ಟಿದ್ದಕ್ಕೆ ಗಲಾಟೆ ಆಗಿತ್ತು. ನಾನು ದುಡಿದಿರುವುದನ್ನು ಹಾಳು ಮಾಡುತ್ತಿರುವೆ ಎಂದು ಆಗಾಗ್ಗೆ ಇಬ್ಬರು ಸಹೋದರ ನಡುವೆ ಜಗಳ ನಡೆಯುತ್ತಲೇ ಇತ್ತು.‌

ತಮ್ಮನನ್ನು ಕೊಲೆ‌ ಮಾಡಲೆಂದೇ ಹೊಂಚುಹಾಕಿ ಕುಳಿತಿದ್ದ ಮಾರುತಿ, ಯರಗಟ್ಟಿ ಹೊರವಲಯದ ಬೂದಿಗೊಪ್ಪ ರಸ್ತೆಯಲ್ಲಿ ಬೈಕ್ ಮೇಲೆ ಬರುತ್ತಿದ್ದ ಗೋಪಾಲನಿಗೆ ಟ್ರ್ಯಾಕ್ಟರ್​​ನಿಂದ ಡಿಕ್ಕಿ ಹೊಡೆದಿದ್ದಾನೆ. ಅವಘಡದಲ್ಲಿ ಜಮೀನಿನಲ್ಲಿ ಬಿದ್ದ ಗೋಪಾಲ ಮೇಲೆ ಮನಬಂದಂತೆ ಟ್ರ್ಯಾಕ್ಟರ್ ಹಾಯಿಸಿ ಕೊಲೆ ಮಾಡಿದ್ದಾನೆ. ನಂತರ ಪೊಲೀಸರಿಗೆ ಹೋಗಿ ಶರಣಾಗಿದ್ದಾನೆ. ಘಟನೆ ಸಂಬಂಧ ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.


Spread the love

LEAVE A REPLY

Please enter your comment!
Please enter your name here