ಶಿವಮೊಗ್ಗ: ಮಹಾತಾಯಿಯೊಬ್ಬಳು ತನ್ನ ನವಜಾತ ಶಿಶುವೊಂದನ್ನು ಶೌಚಾಲಯದಲ್ಲಿ ಎಸೆದು ಜಾಗ ಖಾಲಿ ಮಾಡಿರುವ ಘಟನೆ ನಡೆದಿದೆ. ಈ ಅಮಾನವೀಯ ಕೃತ್ಯಕ್ಕೆ ಎಲ್ಲೆಡೆ ವ್ಯಾಪಕ ಟೀಕೆಗಳು ವ್ಯಕ್ತವಾಗಿವೆ. ಶಿವಮೊಗ್ಗದ ಮೆಗ್ಗಾನ್ ಹೆರಿಗೆ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ಸಾವನ್ನಪ್ಪಿರುವ ಮಗುವನ್ನು ಶೌಚಾಲಯದಲ್ಲಿ ಬಿಟ್ಟು ಹೋಗಿದ್ದಾಳೆ.
Advertisement
ಶಿವಮೊಗ್ಗ ಹಕ್ಕಿಪಿಕ್ಕಿ ಕ್ಯಾಂಪ್ ನ ನಜೀಮಾ ಎನ್ನುವ ಮಹಿಳೆಯಿಂದ ಕೃತ್ಯ ನಡೆದಿದ್ದು, ಕೇಸ್ ಶೀಟ್ ತಗೆದುಕೊಂಡು ಪರಾರಿಯಾಗಿದ್ದಾಳೆ. ಮೆಗ್ಗಾನ್ ಆಸ್ಪತ್ರೆ ಸಿಬ್ಬಂದಿ ಪ್ರಕರಣದ ಸಂಬಂಧ ದೊಡ್ಡಪೇಟೆ ಠಾಣೆಗೆ ದೂರು ನೀಡಿದ್ದಾರೆ.