ಹೆತ್ತ ತಾಯಿಯನ್ನೇ ಬರ್ಬರವಾಗಿ ಕೊಲೆಗೈದು ಕಾಡಿನಲ್ಲಿ ಸುಟ್ಟು ಹಾಕಿದ ಪಾಪಿ ಮಗ!

0
Spread the love

ಮಂಗಳೂರು:- ಮಂಗಳೂರು-ಕಾಸರಗೋಡು ಮದ್ಯೆ ಇರುವ ಮಂಜೇಶ್ವರದ ವರ್ಕಾಡಿಯಲ್ಲಿ ಕಟುಕ ಪುತ್ರನೊಬ್ಬ ತನ್ನ ಹೆತ್ತ ತಾಯಿಯನ್ನೇ ಬರ್ಬರವಾಗಿ ಹತ್ಯೆ ಮಾಡಿ ಕಾಡಿನಲ್ಲಿ ಸುಟ್ಟು ಹಾಕಿರುವ ಘಟನೆ ಜರುಗಿದೆ. ರಾತ್ರಿ ಹೊತ್ತು ಮನೆಯಲ್ಲಿ ಮಲಗಿದ್ದ ತಾಯಿಯನ್ನು ಮಾರಕಾಸ್ರ್ರಗಳಿಂದ ಹೊಡೆದು ಬಳಿಕ ಕಾಡಿನೊಳಗೆ ಎಳೆದೊಯ್ದು ಬೆಂಕಿ ಹಚ್ಚಿ ಸುಟ್ಟಾಕ್ಕಿದ್ದಾನೆ. ಮೆಲ್ವಿನ್ ಮೊಂತೇರೊ ತಾಯಿ ಕೊಂದ ಪಾಪಿ ಮಗ. ಈತ ಇದೀಗ ಉಡುಪಿಯಲ್ಲಿ ಸಿಕ್ಕಿಬಿದ್ದಿದ್ದಾನೆ.

Advertisement

ಇನ್ನು ತಾಯಿಯನ್ನು ಕೊಂದು ಅತ್ತೆಯನ್ನು ಕೊಲ್ಲಲು ಯತ್ನಿಸಿದ ಪಾಪಿ ಮೆಲ್ವಿನ್, ರಾತ್ರಿ ಇಡೀ ಮನೆಯಲ್ಲಿ ಕಾಲ ಕಳೆದಿದ್ದಾನೆ. ಬಳಿಕ ಬೆಳಗ್ಗೆ ವಿಚಾರ ಊರಿನವರಿಗೆ ತಿಳಿಯುತ್ತಲೇ ಒಬ್ಬೊಬ್ಬರೆ ಅಲ್ಲಿಗೆ ಬಂದಿದ್ದಾರೆ. ಅಲ್ಲಿಂದ ಮೆಲ್ವಿನ್ 2 ಕಿಲೋಮೀಟರ್ ಓಡಿ ಹೋಗಿ ಆಟೋ ಹಿಡಿದು ಹೊಸಂಗಡಿಗೆ ತಲುಪಿದ್ದಾನೆ. ಬಳಿಕ ಮಂಗಳೂರು ಬಸ್ ಹತ್ತಿ ಮಂಗಳೂರು ಕೆ.ಎಸ್.ಆರ್.ಟಿ.ಸಿ ಬಸ್ ಸ್ಟಾಂಡ್ ನಲ್ಲಿ ಇಳಿದಿದ್ದಾನೆ. ಅಲ್ಲಿಂದ ಕುಂದಾಪುರ ಬಸ್ ಹತ್ತಿ ಬೈಂದೂರು ತಲುಪಿದ್ದಾನೆ.

ಮೆಲ್ವಿನ್ ಅರ್ಥ್ ಮೂವರ್ಸ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ. ಬೈಂದೂರು ಸುತ್ತಾಮುತ್ತಾ ಕಲ್ಲಿನಕೋರೆಯಲ್ಲಿ ಈ ಹಿಂದೆ ಕೆಲಸ ಮಾಡಿದ್ದ. ಆದ್ರಿಂದ ಆ ಜಾಗಕ್ಕೆ ಹೋಗಲು ಆತ ಇಲ್ಲಿಗೆ ಬಂದಿದ್ದ. ಇನ್ನು ಒಂದು ಅಂಗಡಿಯಲ್ಲಿ ಕುಳಿತುಕೊಂಡಿದ್ದಾಗ ಬೈಂದೂರು ಪೊಲೀಸರ ಸಹಕಾರದಿಂದ ಕೇರಳ ಪೊಲೀಸರು ಬಂಧಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here