ಹಾಸನ:- ಆಲೂರಿನ ಕದಾಳುಚನ್ನಾಪುರ ಗ್ರಾಮದಲ್ಲಿ ಅಡುಗೆ ಮಾಡದ ವಿಚಾರಕ್ಕೆ ತಾಯಿ-ಮಗನ ನಡುವೆ ನಡೆದ ಜಗಳ ತಾರಕಕ್ಕೇರಿ ತಾಯಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜರುಗಿದೆ.
Advertisement
45 ವರ್ಷದ ಪ್ರೇಮ ಮಗನಿಂದಲೇ ಕೊಲೆಯಾದ ದುರ್ದೈವಿ. 19 ವರ್ಷದ ಸಂತೋಷ್ ಹೆತ್ತ ತಾಯಿಯನ್ನೇ ಕೊಲೆಗೈದ ಆರೋಪಿಯಾಗಿದ್ದಾನೆ. ಈತ ಗುರುವಾರ ರಾತ್ರಿ ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದ. ಈ ವೇಳೆ ತಾಯಿ ಅಡುಗೆ ಮಾಡದಿದ್ದಕ್ಕೆ ಜಗಳ ತೆಗೆದು, ಮಾತಿಗೆ ಮಾತು ಬೆಳೆದು ದೊಣ್ಣೆಯಿಂದ ತಲೆಗೆ ಬಲವಾಗಿ ಹೊಡೆದಿದ್ದ.
ತೀವ್ರವಾಗಿ ಗಾಯಗೊಂಡಿದ್ದ ಪ್ರೇಮರನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಆಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.