ಹಾವೇರಿ: ಹೆಣ್ಮಕ್ಕಳು ಮಾಂಗಲ್ಯ ಉಳಿಸಿ ಎಂದು ಬೀದಿಗೆ ಬರುವ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಬಿ.ಸಿ.ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಹೇಳಿದೊಂದು, ಮಾಡುವುದೊಂದು ಆಗಿದೆ.
ಆಡು ಮುಟ್ಟದ ಸೊಪ್ಪಿಲ್ಲ, ಸರ್ವಜ್ಞ ಹೇಳದ ವಚನಗಳಿಲ್ಲ ಎಂಬಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಎಲ್ಲದರ ಬೆಲೆಗಳನ್ನು ಏರಿಸಿದ್ದಾರೆ. ಕಾಂಗ್ರೆಸ್ ಯಾವಾಗ ತೊಲಗುತ್ತದೆ ಎಂದು ಜನರು ಕಾಯುತ್ತಿದ್ದಾರೆ. ಹೆಣ್ಮಕ್ಕಳು ಮಾಂಗಲ್ಯ ಉಳಿಸಿ ಎಂದು ಬೀದಿಗೆ ಬರುವ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದು ವಾಗ್ದಾಳಿ ನಡೆಸಿದರು.
ಭ್ರಷ್ಟ ಸರ್ಕಾರದ ವಿರುದ್ಧ ಜನರು ಆಕ್ರೋಶಗೊಂಡಿದ್ದಾರೆ. ಸರ್ಕಾರಕ್ಕೆ ರೈತ ಮೇಲೆ ಕಾಳಜಿ ಇಲ್ಲ. ಹಿಂದುಳಿದವರು, ದೀನದಲಿತರ ಬಗ್ಗೆಯೂ ಕಾಳಜಿ ಇಲ್ಲ. ಹೀಗಾಗಿ ಕಾಂಗ್ರೆಸ್ ಸರ್ಕಾರದಿಂದ ನೊಂದ ಪ್ರತಿಯೊಬ್ಬರು ಬಿಜೆಪಿ ಜನಾಕ್ರೋಶ ಯಾತ್ರೆಯಲ್ಲಿ ಭಾಗವಹಿಸಬೇಕು ಎಂದರು.