ಮೈಸೂರು:- ಜಿಲ್ಲೆಯ ಹುಣಸೂರು ತಾಲ್ಲೂಕು ಚಿಲ್ಕುಂದ ಗ್ರಾಮದ ಬಳಿ ಕಾರು ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿರುವ ಘಟನೆ ಜರುಗಿದೆ.
Advertisement
ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಮಲ್ಲಿಕಾರ್ಜುನ (39) ಮೃತ ದುರ್ದೈವಿ. ಇವರು ಸರಗೂರು ತಾಲೂಕಿನ ತುಂಬಸೋಗೆ ಗ್ರಾಮದ ನಿವಾಸಿ ಎನ್ನಲಾಗಿದೆ. ಚೇತನ್, ಶಮಂತ್ ಗಾಯಗೊಂಡವರು.
ಉಪ್ಪನಂಗಡಿಗೆ ಹೋಗುತ್ತಿದ್ದ ಕಾರಿಗೆ ಪಿರಿಯಾಪಟ್ಟಣ ಕಡೆಯಿಂದ ಬರುತ್ತಿದ್ದ ಟಿಪ್ಪರ್ ರಭಸವಾಗಿ ಗುದ್ದಿದೆ. ಈ ವೇಳೆ ರಸ್ತೆಯ ಬದಿಯ ಮರಕ್ಕೆ ಕಾರು ಅಪ್ಪಳಿಸಿದೆ. ಅಪಘಾತದಿಂದ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


