• About
  • Advertise
  • Privacy & Policy
  • Contact
Thursday, November 26, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ದೆಹಲಿಯ ಕರ್ತವ್ಯ ಪಥದಲ್ಲಿ ನೆರೆದವರನ್ನು ಮಂತ್ರಮುಗ್ಧರನ್ನಾಗಿಸಿದ ರಾಜ್ಯದ ಸ್ತಬ್ಧಚಿತ್ರ

Vijaya Sakshi News Desk by Vijaya Sakshi News Desk
January 27, 2025
in Gadag News, India News, India News
ದೆಹಲಿಯ ಕರ್ತವ್ಯ ಪಥದಲ್ಲಿ ನೆರೆದವರನ್ನು ಮಂತ್ರಮುಗ್ಧರನ್ನಾಗಿಸಿದ ರಾಜ್ಯದ ಸ್ತಬ್ಧಚಿತ್ರ
0
SHARES
2
VIEWS
Share on Facebook

ವಿಜಯಸಾಕ್ಷಿ ಸುದ್ದಿ, ನವದೆಹಲಿ: ರಾಷ್ಟ್ರದ ರಾಜಧಾನಿ ನವದೆಹಲಿಯ ಕರ್ತವ್ಯಪಥದಲ್ಲಿ ಭಾನುವಾರ ನಡೆದ ಗಣರಾಜ್ಯೋತ್ಸ ಸ್ತಬ್ಧಚಿತ್ರ ಪಥಸಂಚಲನದಲ್ಲಿ ಸರ್ವ ಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲು’ ರಾಜ್ಯದ ಸ್ತಬ್ಧಚಿತ್ರವು ಅಲ್ಲಿ ನೆರೆದ ಜನಸ್ತೋಮವನ್ನು ಮಂತ್ರಮುಗ್ಧರನ್ನಾಗಿಸಿದ್ದಲ್ಲದೇ, ಕರತಾಡನದ ಮೂಲಕ ಅದ್ದೂರಿ ಸ್ವಾಗತ ದೊರೆಯಿತು.

ರಾಜಧಾನಿಯ ಕರ್ತವ್ಯಪಥದಲ್ಲಿ ರಾಜ್ಯದ ಸ್ತಬ್ಧಚಿತ್ರ ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ, ಶಾಂತಿ-ಸಹಬಾಳ್ವೆಯನ್ನು ಪ್ರತಿಪಾದಿಸಿತು. ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದೆ. ನಮ್ಮ ರಾಜ್ಯವು ವರ್ಷದಿಂದ ವರ್ಷಕ್ಕೆ ಹೊಸ ಮೈಲಿಗಲ್ಲನ್ನು ಸ್ಥಾಪಿಸುತ್ತಲೇ ಸಾಗಿದ್ದು, ಈ ಬಾರಿ ಲಕ್ಕುಂಡಿಯ ಶಿಲ್ಪಕಲೆಯಿಂದ ಕೂಡಿರುವ ಐತಿಹಾಸಿಕ ದೇವಾಲಯಗಳು ಎಲ್ಲರನ್ನು ಮಂತ್ರಮುಗ್ಧರನ್ನಾಗಿಸಿತು. ನಿಗದಿತ ರೂಪು-ರೇಷೆಗಳಂತೆ ಈ ಸ್ತಬ್ಧಚಿತ್ರ ದಿನಗಳ ಲೆಕ್ಕದಲ್ಲಿ ಮೈದಳೆದಿದೆ. ಕಡಿಮೆ ಅವಧಿಯಲ್ಲಿ ಅತ್ಯಂತ ಅಚ್ಚುಕಟ್ಟಾಗಿ ಸ್ತಬ್ಧಚಿತ್ರ ಕಣ್ಣಿಗೆ ಕಟ್ಟುವ ರೀತಿಯಲ್ಲಿ ಮೂಡಿ ಬಂದಿದ್ದು ವಿಶೇಷ ಎನಿಸಿದೆ.

ಅಹಿಂಸಾವಾದಿಯ ನೆಲೆಬೀಡು, ಶಿಲ್ಪಕಲೆಯ ತೊಟ್ಟಿಲಾದ ಲಕ್ಕುಂಡಿಯಲ್ಲಿ ಶೈವ, ಜೈನ ಮತ್ತು ವೈಷ್ಣವ ದೇವಾಲಯಗಳಿವೆ. ಕಲಾತ್ಮಕತೆಯಿಂದ ಕಂಗೊಳಿಸುವ ಇಲ್ಲಿನ ದೇವಾಲಯಗಳು ಸ್ತಬ್ಧಚಿತ್ರದಲ್ಲಿ ಅವುಗಳ ಪಡಿಯಚ್ಚಿನಂತೆ ಮೂಡಿಬಂದಿದ್ದು, ದೇವಾಲಯವೇ ಮರುಜೀವ ತಳೆದಂತಿದೆ. ರಾಜ್ಯವು ಪ್ರಸ್ತುತಪಡಿಸಿವ ಈ ಸ್ತಬ್ಧಚಿತ್ರವು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಸ್ತಬ್ಧಚಿತ್ರದಲ್ಲಿ ಲಕ್ಕುಂಡಿಯ ದೇವಾಲಯಗಳು ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸಿತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರ ಉಸ್ತುವಾರಿಯಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಕಲಾ ನಿರ್ದೇಶಕ ಶಶಿಧರ ಅಡಪ ಅವರು ಕಲಾ ನಿರ್ದೇಶನ ಮಾಡಿದ್ದಾರೆ. ಸಂಗೀತ ನಿರ್ದೇಶಕ ಪ್ರವೀಣ್ ಡಿ.ರಾವ್ ಅವರ ಕನ್ನಡ ಸಾಹಿತ್ಯ ಇರುವ ಸುಮಧುರವಾದ ಸಂಗೀತ ಕರ್ತವ್ಯಪಥದಲ್ಲಿ ನಿನಾದಿಸಿ ಕೇಳುಗರ ಮನಸೂರಗೊಂಡಿತು.

ಮೈಸೂರು, ಬೆಂಗಳೂರು, ಗದಗ ಮತ್ತು ಧಾರವಾಡದಿಂದ ಆಗಮಿಸಿದ 18 ಜನ ಕಲಾವಿದರಿರುವ ಸ್ತಬ್ಧಚಿತ್ರದ ಇಕ್ಕೆಲಗಳಲ್ಲಿ ತಲಾ ನಾಲ್ಕು ಮಂದಿ ಮಹಿಳೆಯರು ಮತ್ತು ಪುರುಷರು ಜಗ್ಗಲಿಗೆ ಬಾರಿಸುತ್ತಾ, ಸಾಂಪ್ರದಾಯಿಕ ಉಡುಪಿನಲ್ಲಿ ಕರ್ತವ್ಯಪಥದಲ್ಲಿ ಕಂಗೊಳಿಸಿದರು.

10 ಜನ ಕಲಾವಿದರು ಸ್ತಬ್ಧಚಿತ್ರದ ಮೇಲುಭಾಗದಲ್ಲಿ ಪ್ರವಾಸಿಗರಾಗಿ ಗಮನಸೆಳೆದರು. ಕರ್ನಾಟಕದ ಗದಗ ಜಿಲ್ಲೆಯಲ್ಲಿರುವ ಲಕ್ಕುಂಡಿಯನ್ನು ಅದರ ಅದ್ಭುತ ಕಲ್ಲಿನ ವಾಸ್ತುಶಿಲ್ಪಕ್ಕಾಗಿ ‘ಶಿಲ್ಪಕಲೆಯ ತೊಟ್ಟಿಲು’ ಎಂದು ಕರೆಯಲಾಗುತ್ತದೆ. ಇಲ್ಲಿನ ಸುಂದರವಾದ ದೇವಾಲಯಗಳು, ಮೆಟ್ಟಿಲು ಬಾವಿಗಳು ಮತ್ತು ಚಾಲುಕ್ಯ ರಾಜವಂಶದ ಶಾಸನಗಳಿಗೆ ನೆಲೆಯಾಗಿದೆ. ಸಾಂಸ್ಕೃತಿಕ ಶಕ್ತಿ ಕೇಂದ್ರವಾಗಿರುವುದರ ಜೊತೆಗೆ, 10ರಿಂದ 12ನೇ ಶತಮಾನದ ನಡುವೆ ಲಕ್ಕುಂಡಿ ಒಂದು ದೊಡ್ಡ ವಾಣಿಜ್ಯ ಕೇಂದ್ರವಾಗಿತ್ತು. ಈ ನಗರವು ಹಲವಾರು ರಾಜವಂಶಗಳಿಂದ ಆಳಲ್ಪಟ್ಟಿತ್ತಾದರೂ ಅವುಗಳಲ್ಲಿ ಅತ್ಯಂತ ಪ್ರಮುಖವಾದದ್ದು ಚಾಲುಕ್ಯರ ರಾಜವಂಶ.

ಲಕ್ಕುಂಡಿಯು ಪ್ರಾಚೀನಾನ್ವೇಷಕರು ಮತ್ತು ವಾಸ್ತುಶಿಲ್ಪ ಪ್ರಿಯರ ಸ್ವರ್ಗವಾಗಿದೆ. ಇದು 50 ದೇವಾಲಯಗಳನ್ನು ಹೊಂದಿದ್ದು, ಅವುಗಳಲ್ಲಿ ಹೆಚ್ಚಿನವು ಶಿವನಿಗೆ ಸಮರ್ಪಿತವಾಗಿವೆ; 101 ಮೆಟ್ಟಿಲು ಬಾವಿಗಳು (ಕಲ್ಯಾಣಿ / ಪುಷ್ಕರಣಿ); ಮತ್ತು 29 ಶಾಸನಗಳು ಇಲ್ಲಿವೆ. ಇವುಗಳು ಕಲ್ಯಾಣಿ ಚಾಲುಕ್ಯರ ಕಲೆ, ಸಂಸ್ಕೃತಿ ಮತ್ತು ವಾಸ್ತುಶಿಲ್ಪದ ಶ್ರೇಷ್ಠತೆಯ ಸಂಕೇತವಾಗಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ನಿರ್ವಹಿಸುತ್ತಿರುವ ವಸ್ತುಸಂಗ್ರಹಾಲಯವು ಲಕ್ಕುಂಡಿಯ ಶ್ರೀಮಂತ ಶಿಲ್ಪಕಲೆಯನ್ನು ಪ್ರದರ್ಶಿಸಿತು. 2022ರ ಇಲಾಖೆಯು ಪ್ರದರ್ಶಿಸಿದ್ದ ʼಸಾಂಪ್ರದಾಯಿಕ ಕಸೂತಿ ತೊಟ್ಟಿಲುʼಗೆ ದ್ವಿತೀಯ ಪ್ರಶಸ್ತಿ, 2015ರಲ್ಲಿ ರಾಜ್ಯವು ಚನ್ನಪಟ್ಟದ ಗೊಂಬೆಗಳಿಗೆ ತೃತೀಯ, 2012ರಲ್ಲಿ ದಕ್ಷಿಣ ಕನ್ನಡ ಭೂತಾರಾಧನೆಗೆ ತೃತೀಯ, 2011ರಲ್ಲಿ ಬೀರ‍್ನ ಪಾರಂಪರಿಕ ಕಲೆಯಾದ ‘ಬಿದರಿ’ ಸ್ತಬ್ಧಚಿತ್ರಕ್ಕೆ ದ್ವಿತೀಯ ಮತ್ತು 2008ರಲ್ಲಿ ಹೋಯ್ಸಳ ವಾಸ್ತುಶಿಲ್ಪಕ್ಕೆ ದ್ವಿತೀಯ ಪ್ರಶಸ್ತಿ ಸಂದಿತ್ತು. 2005ರಲ್ಲಿ ವೈರಾಗ್ಯ ಮೂರ್ತಿ ಬಾಹುಬಲಿಯ ಮಹಾಮಸ್ತಕಾಭಿಷೆೀಕದ ಸ್ತಬ್ಧಚಿತ್ರಕ್ಕೆ ಪ್ರಥಮ ಪ್ರಶಸ್ತಿ ದೊರೆತಿತ್ತು. 2008ರಲ್ಲಿ ಹೊಯ್ಸಳ ಕಲೆಯ ಸ್ತಬ್ಧಚಿತ್ರವು ದ್ವಿತೀಯ ಪ್ರಶಸ್ತಿಯ ಜೊತೆಗೆ ಅತ್ಯುತ್ತಮ ನಿರೂಪಣೆ ಮತ್ತು ಅತ್ಯುತ್ತಮ ಫ್ಯಾಬ್ರಿಕೇಷನ್ಗಾಗಿ ಪ್ರಶಸ್ತಿ ಲಭಿಸಿತ್ತು. ಒಂದೇ ಸ್ತಬ್ಧಚಿತ್ರಕ್ಕಾಗಿ ಮೂರು ಪ್ರಶಸ್ತಿಗಳನ್ನು ಪಡೆದಂತಹ ಅಪರೂಪದ ಸಾಧನೆಯನ್ನು ನಮ್ಮ ರಾಜ್ಯವು ಮಾಡಿದೆ ಎನ್ನುವುದು ಹೆಮ್ಮೆಯ ಸಂಗತಿಯಾಗಿದೆ.

Tags: BreakingNewsKarnatakalakundi stabdha chitraVijayasakshivijayasakshinews
ShareSendShare
Previous Post

ನಮ್ಮ ಹಕ್ಕು, ಕರ್ತವ್ಯಗಳನ್ನು ಸಮರ್ಥವಾಗಿ ನಿರ್ವಹಿಸೋಣ

Next Post

ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಗಣರಾಜ್ಯೋತ್ಸವ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಗಣರಾಜ್ಯೋತ್ಸವ

ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಗಣರಾಜ್ಯೋತ್ಸವ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

November 19, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಮಹಿಳಾ ಮೀಸಲಾತಿಗೆ ಮೋದಿ ಸ್ವಾಗತ: ಮಹಿಳೆಯರನ್ನು ಗೌರವಿಸುವುದು ದೇಶದ ಗೌರವ ಎಂದ ಪ್ರಧಾನಿ

OBC ಮೀಸಲಾತಿ ಕಡಿತಗೊಳಿಸಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಯತ್ನ ಭಯಾನಕ: ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ

November 26, 2026
ರಣಬೀರ್ ಕಪೂರ್-ಯಶ್ ನಟನೆಯ ರಾಮಾಯಣಕ್ಕೆ ಭರ್ಜರಿ ರೆಸ್ಪಾನ್ಸ್: 800 ಕೋಟಿ ಕ್ಲಬ್ ಸೇರಿದ ಸಿನಿಮಾ

ಆಸ್ಕರ್ ವಿಷ್ಯುವಲ್ ಎಫೆಕ್ಟ್ಸ್ ರೇಸ್ʼನಲ್ಲಿ ‘ರಾಮಾಯಣ’: ಅಗ್ರ 20 ಸಿನಿಮಾಗಳ ಪಟ್ಟಿಯಲ್ಲಿ ಯಶ್ ಚಿತ್ರ

November 26, 2026
22ರ ಹರೆಯದಲ್ಲೇ ಹೃದಯಾಘಾತ: ಕಾನೂನು ಪದವಿ ಕನಸು ಕಾಣುತ್ತಿದ್ದ ಯುವಕ ಇನ್ನಿಲ್ಲ

22ರ ಹರೆಯದಲ್ಲೇ ಹೃದಯಾಘಾತ: ಕಾನೂನು ಪದವಿ ಕನಸು ಕಾಣುತ್ತಿದ್ದ ಯುವಕ ಇನ್ನಿಲ್ಲ

November 26, 2026
ಗದಗದ ಚಿತ್ರಣ ಬದಲಿಸಲು ಎಚ್.ಕೆ. ಪಾಟೀಲರ ಮಾಸ್ಟರ್ ಪ್ಲ್ಯಾನ್!

ಗದಗದ ಚಿತ್ರಣ ಬದಲಿಸಲು ಎಚ್.ಕೆ. ಪಾಟೀಲರ ಮಾಸ್ಟರ್ ಪ್ಲ್ಯಾನ್!

November 26, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಮಹಿಳಾ ಮೀಸಲಾತಿಗೆ ಮೋದಿ ಸ್ವಾಗತ: ಮಹಿಳೆಯರನ್ನು ಗೌರವಿಸುವುದು ದೇಶದ ಗೌರವ ಎಂದ ಪ್ರಧಾನಿ

OBC ಮೀಸಲಾತಿ ಕಡಿತಗೊಳಿಸಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಯತ್ನ ಭಯಾನಕ: ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ

November 26, 2026
ರಣಬೀರ್ ಕಪೂರ್-ಯಶ್ ನಟನೆಯ ರಾಮಾಯಣಕ್ಕೆ ಭರ್ಜರಿ ರೆಸ್ಪಾನ್ಸ್: 800 ಕೋಟಿ ಕ್ಲಬ್ ಸೇರಿದ ಸಿನಿಮಾ

ಆಸ್ಕರ್ ವಿಷ್ಯುವಲ್ ಎಫೆಕ್ಟ್ಸ್ ರೇಸ್ʼನಲ್ಲಿ ‘ರಾಮಾಯಣ’: ಅಗ್ರ 20 ಸಿನಿಮಾಗಳ ಪಟ್ಟಿಯಲ್ಲಿ ಯಶ್ ಚಿತ್ರ

November 26, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper